Advertisement
ತಾಲೂಕು ಕೇಂದ್ರಗಳು ಸೇರಿದಂತೆ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜ ಪ್ರದರ್ಶಿಸಿ, ಘೋಷಣೆ ಕೂಗಿ ಸಿಹಿತಿಂಡಿ ಹಂಚಿದರು.
Related Articles
ಕ್ಷೇತ್ರದಲ್ಲಿ ಭರ್ಜರಿ ಗೆಲುವು
ಗೋವಾದಲ್ಲಿ ಬಿಜೆಪಿ ಆಡಳಿತಕ್ಕೇ ರುವುದು ಖಚಿತವಾಗಿದೆ. ಪಣಜಿಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಅಲ್ಲಿ ನೆಲೆಸಿರುವ ಕರ್ನಾಟಕದ ಜನರ ಕೊಡುಗೆಯೂ ಇದೆ. ಸಾಕಷ್ಟು ಪೈಪೋಟಿ ಇದ್ದ ಸಂದರ್ಭದಲ್ಲಿ ಕರ್ನಾಟಕದ ಜನರ ಮತವೂ ಬಿಜೆಪಿ ಗೆಲುವಿಗೆ ಕಾರಣ ಎಂದು ಪಣಜಿ ವಿಧಾನಸಭಾ ಚುನಾವಣೆಯ ಉಸ್ತುವಾರಿ ವಹಿಸಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ವಕ್ತಾರ ಕ್ಯಾ| ಗಣೇಶ ಕಾರ್ಣಿಕ್,
ಮುಖಂಡರಾದ ಸಂಜಯ್ ಪ್ರಭು, ವಸಂತ್ ಪೂಜಾರಿ ಅವರು ಕಾಮತ್ ಅವರ ಜತೆಗಿದ್ದರು.
Advertisement
ಉಡುಪಿ: ಪಂಚರಾಜ್ಯ ಚುನಾವಣೆ ಫಲಿತಾಂಶವು ಕರ್ನಾಟಕ ದಲ್ಲಿ ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಗುರುವಾರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಯಶಸ್ವಿ ಆಡಳಿತವು ಈ ಚುನಾ ವ ಣ ಫಲಿತಾಂಶಕ್ಕೆ ಪೂರಕವಾಗಿದೆ. ಪಂಚರಾಜ್ಯ ಚುನಾ ವ ಣ ಫಲಿತಾಂಶವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದ್ದು ಕರ್ನಾಟಕದ ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೂಮ್ಮೆ ಅಭಿವೃದ್ಧಿ ಪರ ಸರಕಾರ ರಚಿಸಲಿದ್ದೇವೆ ಎಂದರು.
ಈ ಚುನಾವಣೆಯಲ್ಲಿ ಜನತೆ ವಿಪಕ್ಷಗಳ ಜಾತಿ ರಾಜಕಾರಣ ಮತ್ತು ಕುಟುಂಬ ರಾಜಕಾರಣವನ್ನು ತಿರಸ್ಕರಿಸಿ, ಅಭಿವೃದ್ಧಿ ಮತ್ತು ಹಿಂದುತ್ವದ ಪರ ಜನಾದೇಶ ನೀಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಜನಪರ ಆಡಳಿತ ವೈಖರಿಯನ್ನು ಮೆಚ್ಚಿ ಜನತೆ ಬಿಜೆಪಿಯನ್ನು ಆಶೀರ್ವದಿಸಿದ್ದಾರೆ. ಉತ್ತರ ಪ್ರದೇಶ ಸಹಿತವಾಗಿ ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿ ಸರಕಾರ ರಚಿಸಲಿದೆ. ಈ ಮೂಲಕ ದೇಶದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ಮತ್ತೊಮ್ಮೆ ನಾಂದಿ ಹಾಡಲಿದ್ದೇವೆ ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಯಶ್‌ಪಾಲ್ ಎ. ಸುವರ್ಣ, ಮುಖಂಡರಾದ ಗುರ್ಮೆ ಸುರೇಶ್ ಶೆಟ್ಟಿ, ಸಲೀಂ ಅಂಬಾಗಿಲು, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಸತ್ಯಾನಂದ ನಾಯಕ್, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ವೀಣಾ ಎಸ್. ಶೆಟ್ಟಿ, ರಶ್ಮಿತಾ ಬಿ. ಶೆಟ್ಟಿ, ಪ್ರವೀಣ್ ಕುಮಾರ್ ಗುರ್ಮೆ, ದಾವೂದ್ ಅಬೂಬಕ್ಕರ್, ಆಲ್ವಿನ್ ಡಿ’ಸೋಜಾ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಚಂದ್ರಶೇಖರ ಪ್ರಭು, ಬಾಲಕೃಷ್ಣ ಶೆಟ್ಟಿ ಸಹಿತವಾಗಿ ನಗರಸಭಾ ಸದಸ್ಯರು ಹಾಗೂ ಜಿಲ್ಲಾ ಮೋರ್ಚಾ, ಮಂಡಲಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.