ತಿ.ನರಸಿಪುರ: ಉತ್ತರ ಪ್ರದೇಶದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಯು ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿಯನ್ನು ವಿತರಿಸಿ ಜಯಘೋಷ ಕೂಗಿ ಸಂಭ್ರಮಿಸಿದರು.
ಜಿಪಂ ಉಪಾಧ್ಯಕ್ಷ ಜಿ.ನಟರಾಜು ಮಾತನಾಡಿ, ಭಯೋತ್ಪಾದನೆಗೆ ಕಡಿವಾಣ ಹಾಕಿ ದೇಶದಲ್ಲಿ ಆರ್ಥಿ ಕತೆಯಲ್ಲಿ ಮಹತ್ತರ ಬದಲಾವಣೆ ತರಲು ಮೋದಿ ಅವರು ನೋಟುಗಳನ್ನು ಅಮಾನ್ಯಿà ಕರಣಗೊಳಿಸಿದ್ದ ಕ್ರಮಕ್ಕೆ ಜನ ಬೆಂಬಲಿಸಿದ್ದಾರೆ ಎಂದರು. ಜಿಪಂ ಮಾಜಿ ಸದಸ್ಯೆ ಎಂ.ಸುಧಾ ಮಹದೇವಯ್ಯ ವಿಜಯೋತ್ಸವದ ನೇತೃತ್ವ ವಹಿಸಿದ್ದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕರೋಹಟ್ಟಿ ಮಹದೇವಯ್ಯ, ಜಿಲ್ಲಾ ಸಮಿತಿ ಸದಸ್ಯ ತೋಟದಪ್ಪ ಬಸವರಾಜು, ತಾಪಂ ಸದಸ್ಯ ಎಂ.ರಮೇಶ್, ವೀರಶೈವ ಮಹಾಸಭಾ ಉಪಾಧ್ಯಕ್ಷ ಸಿದ್ದಲಿಂಗಸ್ವಾಮಿ, ಹಿಂ.ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ವೆಂಕಟ ರಮಣಶೆಟ್ಟಿ, ಉಪಾಧ್ಯಕ್ಷ ಕೆ.ನಂಜುಂ ಡಸ್ವಾಮಿ, ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎನ್. ರಂಗುನಾಯಕ, ಯುವ ಮೋರ್ಚಾ ಅಧ್ಯಕ್ಷ ಮಣಿಕಂಠ ರಾಜ್‌ಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ನಂಜಮ್ಮಣ್ಣಿ, ಸ್ಲಂ ಮೋರ್ಚಾ ಅಧ್ಯಕ್ಷ ಗಣೇಶ್ ಇನ್ನಿತರರು ಹಾಜರಿದ್ದರು.
ಹುಣಸೂರಲ್ಲಿ ಕಾರ್ಯಕರ್ತರ ವಿಜಯೋತ್ಸವ
ಹುಣಸೂರು: ದೇಶದಲ್ಲಿ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸುತ್ತಿದ್ದಂತೆ ಹುಣಸೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ, ಸಿಹಿ ಹಂಚಿದರು. ಅಧ್ಯಕ್ಷ ಬಿ.ಎಸ್.ಯೋಗಾನಂದ ಕುಮಾರ್ ನೇತೃತ್ವದಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಪ್ರಧಾನಿ ನರೇಂದ್ರಮೋದಿ, ರಾಷ್ಟ್ರಾಧ್ಯಕ್ಷ ಅಮಿತ್ ಷಾ, ರಾಜಾಧ್ಯಕ್ಷ ಯಡಿಯೂರಪ್ಪ ಪರ ಘೋಷಣೆ ಮೊಳಗಿಸಿದರು.
ನಂತರ ಬೈಕ್ ರ್ಯಾಲಿಯಲ್ಲಿ ತೆರಳಿ ಬಸ್ ನಿಲ್ದಾಣದ ಮುಂಭಾಗದ ಕಲ್ಪತರು ವೃತ್ತದಲ್ಲಿ ಅಂತ್ಯ ಗೊಳಿಸಿದರು. ಮಾಜಿ ಅಧ್ಯಕ್ಷ ಹನಗೋಡು ಮಂಜುನಾಥ್, ನಗರ ಅಧ್ಯಕ್ಷ ರಾಜೇಂದ್ರ, ತಂಬಾಕು ಮಂಡಳಿ ಸದಸ್ಯ ಕಿರಣ್‌ಕುಮಾರ್, ಜಿಪಂ ಮಾಜಿ ಸದಸ್ಯ ರಮೇಶ್ ಕುಮಾರ್, ವಕೀಲ ವೀರೇಶ್ ರಾವ್ ಬೊಬಡೆ, ಮುಖಂಡರಾದ ಕೆ.ಟಿ.ಗೋಪಾಲ್, ಸತೀಶ್, ಆದರ್ಶ, ಗೋಪಾಲ್, ಅಪ್ಪಿ ನಾಗರಾಜ್, ರಮೇಶ್ ಭಾಗವಹಿಸಿದ್ದರು.