Advertisement

ನೆರೆಗೆ ಗುರಿಯಾಗಿದ್ದ ಮೊಗಳ್ಳಿಗೆ ಬಿ.ಕೆ.ಹರಿಪ್ರಸಾದ್ ಭೇಟಿ; ಗ್ರಾಮಸ್ಥರೊಂದಿಗೆ ಚರ್ಚೆ

03:32 PM Jul 22, 2022 | Team Udayavani |

ಶಿರಸಿ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ನೆರೆ ಹಾವಳಿಯಿಂದ ತೊಂದರೆಗೊಳಗಾದ ತಾಲೂಕಿನ ಮೊಗಳ್ಳಿಯ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.

Advertisement

ಜನರೊಂದಿಗೆ ಮಾತನಾಡಿ ಸಮಸ್ಯೆಯನ್ನು ತಿಳಿದುಕೊಂಡು ಈ ಗ್ರಾಮದಲ್ಲಿರುವ 150 ಕುಟುಂಬಕ್ಕೆ ಶಾಸ್ವತ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಅದಕ್ಕೆ ಸೂಕ್ತವಾದ ಜಾಗವನ್ನು ಗುರುತಿಸಿ ಅಲ್ಲಿ ತಮ್ಮ ವಾಸ್ತವ್ಯಕ್ಕೆ ಅನುಕೂಲ ಮಾಡಿ ಕೊಡಲು ಪ್ರಯತ್ನಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭಿಮಣ್ಣ ನಾಯ್ಕ, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ರೀಲತಾ ಶಿವಾಜಿ ಕಾಳೇರಮನಿ, ಮುಖಂಡರಾದ ಕಿರಣ್ ನಾಯ್ಕ ಭಾಶಿ, ಕನ್ನಪ್ಪ ಮೊಗಳ್ಳಿ, ಬಿ.ಶಿವಾಜಿ ಬನವಾಸಿ, ರವಿ ನಾಯ್ಕ ಮರಗುಂಡಿ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next