ಹೈದರಾಬಾದ್: ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ‘ಖರೀದಿಸಲು’ ಯತ್ನಿಸಿದ ಆರೋಪದಡಿ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ ತೆಲಂಗಾಣ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರು ನವೆಂಬರ್ 21 ರಂದು ಹಾಜರಾಗಬೇಕು ಅಥವಾ ಅವರನ್ನು ಬಂಧಿಸಲಾಗುವುದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಪೊಲೀಸರು ತನಿಖೆಯನ್ನು ಮುಂದುವರಿಸಬಹುದು, ಆದರೆ ನ್ಯಾಯಾಧೀಶರು ಅದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೈಕೋರ್ಟ್ ತೀರ್ಪು ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ.
ಇದನ್ನೂ ಓದಿ:ಪೋರ್ಕ್, ಟಾಯ್ಸ್, ಬಿಯರ್ ಗಿಲ್ಲ ಅನುಮತಿ: ಇಲ್ಲಿದೆ ಕತಾರ್ ವಿಶ್ವಕಪ್ ಸಮಯದಲ್ಲಿ ನಿಷೇಧಿತ ವಸ್ತುಗಳ ಪಟ್ಟಿ
Related Articles
ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಶಾಸಕರಿಗೆ ಫಾರ್ಮ್‌ಹೌಸ್‌ನಲ್ಲಿ 100 ಕೋಟಿ ರೂ ಆಫರ್ ನೀಡಿದ ಆರೋಪದ ಮೇಲೆ ಮೂವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ಸದ್ಯ ಅವರು ಜಾಮೀನು ಪಡೆದಿದ್ದಾರೆ. ಇದರ ಹಿಂದೆ ಬಿಜೆಪಿ ಪಾತ್ರವಿದೆ ಎಂದು ಟಿಆರ್ ಎಸ್ ಆರೋಪಿಸಿದೆ.