Advertisement
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಪ್ರಶಿಕ್ಷಣ ಶಿಬಿರದಲ್ಲಿ ಸಂತೋಷ್ ಈ ಹೇಳಿಕೆ ನೀಡಿದ್ದಾರೆ. ಇದು ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದ್ದು, ಕೆಲವು ಸಚಿವರು ಮತ್ತು ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆಯೇ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
Related Articles
Advertisement
ಇದನ್ನೂ ಓದಿ:ಒಂದೇ ಓವರ್ ನಲ್ಲಿ 7 ಸಿಕ್ಸರ್ ಹೊಡೆದ ಋತುರಾಜ್ ಗಾಯಕ್ವಾಡ್: ದ್ವಿಶತಕದ ಸಾಧನೆ
ಈ ಹಿಂದೆ ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಬಹುತೇಕ ಹಾಲಿ ಎಲ್ಲ ಸದಸ್ಯರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು. ಪರಿಣಾಮ ಯಾರೂ ಕೂಡ ಊಹೆ ಮಾಡದ ರೀತಿಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿದಿತ್ತು. ಈ ಪ್ರಯೋಗವನ್ನು ಕರ್ನಾಟಕದಲ್ಲೂ ಅನುಷ್ಠಾನ ಮಾಡಬೇಕೆಂದು ಬಿಜೆಪಿಯ ಒಂದು ಗುಂಪು ಬೇಡಿಕೆಯನ್ನು ಮುಂದಿಟ್ಟಿದೆ.
ಹಾಗೇನಾದರೂ ವರಿಷ್ಠರು ನಿರ್ಧಾರ ತೆಗೆದುಕೊಂಡರೆ ಅವೇಶನ ನಡೆಯುವ ವೇಳೆ ಮೊದಲ ಸಾಲಿನಲ್ಲಿ ಕೂರುವ ಬಹುತೇಕ ನಾಯಕರಿಗೆ ಮೊದಲನೇ ಮತ್ತು 2ನೇ ಸಾಲಿನಲ್ಲಿ ಕೂರುವವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ.
ಒಂದಿಷ್ಟು ಹಳಬರಿಗೆ ಟಿಕೆಟ್ ಕೈ ತಪ್ಪಿಸಲು ದೆಹಲಿಯ ಪ್ರಭಾವಿ ನಾಯಕರು ಕೂಡ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆಡಳಿತ ವಿರೋಧಿ ಅಲೆಯನ್ನು ಮೆಟ್ಟಬೇಕಾದರೆ ಹಳಬರಿಗೆ ಕೋಕ್ ನೀಡುವುದು ಅನಿವಾರ್ಯ ಎಂಬ ಮಾತು ಕೇಳಿಬರುತ್ತಿದೆ.
ಪ್ರತಿ ಚುನಾವಣೆಯಲ್ಲೂ ಹೊಸತನವನ್ನೇ ಪ್ರಯೋಗ ಮಾಡುವ ಬಿಜೆಪಿ ಕರ್ನಾಟಕದಲ್ಲಿ ಯಾವ ಮಾದರಿ ಅನುಸರಿಸುತ್ತದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.