ಬೆಂಗಳೂರು: ಚಿಲುಮೆ ಸಂಸ್ಥೆಯಲ್ಲಿ ಹಣವನ್ನು ಬ್ಲ್ಯಾಕ್ ಆಂಡ್ ವೈಟ್ ಮಾಡುವ ದಂಧೆ ನಡೆಯುತ್ತಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮತದಾರರ ಮಾಹಿತಿ ಅಕ್ರಮದ ಬಗ್ಗೆ ನಾವು ಎಲ್ಲ ವಿಚಾರವನ್ನು ಜನರ ಮುಂದೆ ಇಟ್ಟಿದ್ದೇವೆ. ಮತದಾರರ ಪಟ್ಟಿಯಲ್ಲೂ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ:ಅಭಿಷೇಕ್ ಗೆ ನಾಯಕಿಯಾದರಾ ಕಾಂತಾರದ ಲೀಲಾ? ಏನಿದು ಹೊಸ ಸುದ್ದಿ
ಈ ವಿಚಾರವಾಗಿ ಸರ್ಕಾರ ಪ್ರಮುಖ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ನಿನ್ನೆ ಪೊಲೀಸರು ದಾಳಿ ನಡೆಸಿ ಕೆಲವು ದಾಖಲೆ ವಶಪಡಿಸಿಕೊಂಡಿದ್ದು, ಅಲ್ಲಿ ನೋಟು ಏಣಿಕೆ ಯಂತ್ರಗಳು ಲಭ್ಯವಾಗಿವೆ. ಟ್ರಸ್ಟ್ ಗಳಲ್ಲಿ ಎರಡು ಸಾವಿರಕ್ಕಿಂತ ಹೆಚ್ಚಿನ ಹಣವನ್ನು ದೇಣಿಗೆಯಾಗಿ ಪಡೆಯುವಂತಿಲ್ಲ. ಚೆಕ್ ಮೂಲಕವೇ ಪಡೆಯಬೇಕು. ಹೀಗಿರುವಾಗ ಅಲ್ಲಿ ನೋಟು ಏಣಿಕೆ ಯಂತ್ರ ಯಾಕಿತ್ತು? ಆ ಕಚೇರಿಯಲ್ಲಿ ಕಪ್ಪು ಹಣ ಬಿಳಿ ಹಣವಾಗಿ ಪರಿವರ್ತನೆಯಾಗುತ್ತಿತ್ತು. ಈ ವಿಚಾರವಾಗಿ ಮುಂದೆ ದಾಖಲೆ ಸಮೇತ ಮಾತನಾಡುತ್ತೇವೆ ಎಂದು ತಿಳಿಸಿದರು.