Advertisement

ಕರಾಳ ದಿನ ಖಂಡನೀಯ: ಯಡಿಯೂರಪ್ಪ

07:05 AM Nov 02, 2017 | Team Udayavani |

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದು ಎಂಇಎಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.  ಯಡಿಯೂರಪ್ಪ ಹೇಳಿದ್ದಾರೆ.

Advertisement

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಕನ್ನಡ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಸಮೃದಟಛಿ, ಸಶಕ್ತ ಕರ್ನಾಟಕ ನಿರ್ಮಾಣದ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಮುನ್ನಡೆಯಬೇಕು. ಅಂತಹ ಸಂದರ್ಭದಲ್ಲಿ ಸುದ್ದಿಯಲ್ಲಿರುವುದೇ ಪ್ರಧಾನ ಎಂದುಕೊಂಡಿರುವ ಕೆಲವು ಎಂಇಎಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಿದ್ದು, ಇದನ್ನು ನಾನು ಖಂಡಿಸುತ್ತೇನೆ. ಗಡಿ ನಾಡಿನಲ್ಲಿ ಕನ್ನಡಿಗರು ಮತ್ತು ಮರಾಠಿಗರು ಒಟ್ಟಾಗಿ ಬಾಳುವೆ ಮಾಡಬೇಕು. ಈ ನಿಟ್ಟಿನಲ್ಲಿ ಆ ಭಾಗದ ಎಲ್ಲರೂ ಸಂಕಲ್ಪ ಮಾಡಬೇಕು ಎಂದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಜಂಟಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ವಿಧಾನ ಪರಿಷತ್‌ ಸದಸ್ಯ ರಾಮಚಂದ್ರ ಗೌಡ, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌, ಉಪಾಧ್ಯಕ್ಷ ಕೆ.ಪಿ.ನಂಜುಂಡಿ, ನಿವೃತ್ತ ಐಎಎಸ್‌ ಅಧಿಕಾರಿ ಶಿವರಾಮ…, ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಮತ್ತಿತರರು ಇದ್ದರು.  

ಬಿಎಸ್‌ವೈ-ಸಂತೋಷ್‌ ದೂರ ದೂರ 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಜಂಟಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ನಡುವಿನ ಮುನಿಸು ಇನ್ನೂ ಪೂರ್ಣ ದೂರವಾಗಿಲ್ಲ ಎಂಬುದು ರಾಜ್ಯೋತ್ಸವದ ವೇಳೆ ಮತ್ತೂಮ್ಮೆ ಸಾಬೀತಾಯಿತು.

ಯಡಿಯೂರಪ್ಪ ಮಾತನಾಡಿಸಲು ಪ್ರಯತ್ನಿಸಿದರೂ ಸಂತೋಷ್‌ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಧ್ವಜಾರೋಹಣ ವೇಳೆ ಯಡಿಯೂರಪ್ಪ ಅವರು ಕೈಮಾಡಿ ಪಕ್ಕಕ್ಕೆ ಬರುವಂತೆ ಆಹ್ವಾನಿಸಿದರಾದರೂ ಸಂತೋಷ್‌ ಅವರು ದೂರದಲ್ಲೇ ನಿಂತರು.
 

Advertisement
Advertisement

Udayavani is now on Telegram. Click here to join our channel and stay updated with the latest news.

Next