Advertisement

ಸಿದ್ದರಾಮಯ್ಯರಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ-ಕಾಂಗ್ರೆಸ್ ತಳ್ಳಾಟ, ನೂಕಾಟ

01:09 PM Aug 19, 2022 | Team Udayavani |

ಚಿಕ್ಕಮಗಳೂರು: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೊಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.

ರಸ್ತೆ ಮಧ್ಯೆ ತಳ್ಳಾಟ ನೂಕಾಟ

ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.

ಕೆಲ ಹೊತ್ತು ಟ್ರಾಫಿಕ್ ಜಾಮ್
ಪೊಲೀಸರು ಪೊಲೀಸ್ ವಾಹನ ಇದ್ದರೂ ಪ್ರತಿಭಟನಾಕಾರರನ್ನು ಬಂಧಿಸಲಿಲ್ಲ.ಸರ್ಕಾರಿ ಪ್ರಾಯೋಜಿತ ಪ್ರತಿಭಟನೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಕಾಂಗ್ರೆಸ್ ಕಿಡಿ

ಸಿದ್ದರಾಮಯ್ಯ ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು.ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ? ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ ಎಸ್ ಪಿ ಯನ್ನು ಕೂಡಲೇ ಅಮಾನತುಗೊಳಿಸಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದೆ.

ಸಿದ್ದರಾಮಯ್ಯ ಅವರ ಮೇಲೆ ದಾಳಿ ಮಾಡಿ ಬಂಧನಕೊಳಗಾಗಿದ್ದ ಗೂಂಡಾಗಳನ್ನು ರಾತ್ರೋರಾತ್ರಿ ಶಾಸಕ ಅಪ್ಪಚ್ಚು ರಂಜನ್ ಬಿಡಿಸಿಕೊಂಡು ಬಂದಿದ್ದಾರೆ.ಆರಗ ಜ್ಞಾನೇಂದ್ರ ಅವರೇ, ದಾಳಿಕೋರರ ಮೇಲೆ ಗಂಭೀರ ಪ್ರಕರಣ ದಾಖಲಿಸದಿರುವುದೇಕೆ?ಇದು ಸರ್ಕಾರಿ ಪ್ರಾಯೋಜಿತ ಕೃತ್ಯವಲ್ಲವೇ? ಇದು ವಿಪಕ್ಷ ನಾಯಕರ ಪ್ರಾಣ ಹಾನಿಯ ಪ್ರಯತ್ನ ಎಂದೇ ಭಾವಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದೆ.

ರಾಜ್ಯದ ಎಲ್ಲೆಡೆ ಭಾರಿ ಪ್ರತಿಭಟನೆ
ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆಯಲು ಯತ್ನಿಸಿ ಮುತ್ತಿಗೆ ಹಾಕಿರುವುದನ್ನು ಖಂಡಿಸಿ ಮೈಸೂರು ಸೇರಿ ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next