Advertisement

ಗೋವಾದಲ್ಲಿ ಏರಿಕೆಯಾಗುತ್ತಿದೆ ಬ್ಲ್ಯಾಕ್ ಫಂಗಸ್ : ಸಾವಿನ ಪ್ರಮಾಣವೂ ಹೆಚ್ಚಳ

04:12 PM Jun 14, 2021 | Team Udayavani |

ಪಣಜಿ: ಗೋವಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ, ಆದರೆ ಬ್ಲ್ಯಾಕ್ ಫಂಗಸ್ ಸೋಂಕು ಹರಡುತ್ತಿರುವುದು ಮಾತ್ರವಲ್ಲದೆಯೇ ಬ್ಲ್ಯಾಕ್ ಫಂಗಸ್‍ಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕ ತಂದಿದೆ.

Advertisement

ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದು ಸದ್ಯ 4882 ಸಕ್ರೀಯ ಪ್ರಕರಣಗಳಿವೆ. ಕೋವಿಡ್  ಸೋಂಕಿನಿಂದ ಗುಣಮುಖರಾಗುತ್ತಿರುವ ಪ್ರಮಾಣ ಶೇ 95.19 ರಷ್ಟಿದೆ. ಆದರೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹರಡುತ್ತಿರುವುದು ಆತಂಕ ಉಂಟುಮಾಡಿದೆ. ಆರೋಗ್ಯ ಇಲಾಖೆಯ ಮಾಹಿತಿಯ ಅನುಸಾರ ರಾಜ್ಯದಲ್ಲಿ ಇದುವರೆಗೂ 24 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ 10 ಜನರು ಸಾವನ್ನಪ್ಪಿದ್ದಾರೆ. 11 ಜನ ಸೋಂಕಿತರು ಗೋವಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಅರುಣ್ ಸಿಂಗ್ ಆಗಮನಕ್ಕೂ ಮೊದಲೇ ಬಿಜೆಪಿಯಲ್ಲಿ ತಾಲೀಮು ಶುರು

ಗೋವಾ ಸರ್ಕಾರವು ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಗೋವಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರತ್ಯೇಕ ವಾರ್ಡ ವ್ಯವಸ್ಥೆ ಮಾಡಿದೆ. ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಅಗತ್ಯವಿರುವ ಎಲ್ಲ ಔಷಧೋಪಚಾರಗಳು ಗೋವಾ ವೈದ್ಯಕೀಯ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದು ಆಸ್ಪತ್ರೆಯ ಹಿರಿಯ ವೈದ್ಯ ಡಾ. ಬೆತೋಡ್ಕರ್ ರವರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next