Advertisement
ಖ್ಯಾತ ತಜ್ಞ ವೈದ್ಯರು ಹಾಗೂ ಕೊರೊನಾ ಮತ್ತುಬ್ಲ್ಯಾಕ್ ಫಂಗಸ್ ಚಿಕಿತ್ಸಾ ಶಿಷ್ಟಾಚಾರ ಸಮಿತಿಗಳತಜ್ಞರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದಅವರು ಸೋಮವಾರದಿಂದಲೇ ಬ್ಲ್ಯಾಕ್ ಫಂಗಸ್‌ಕಾಣಿಸಿಕೊಂಡ ಮೂಲ ಹುಡುಕುವಂತೆ ನಿರ್ದೇಶನ ನೀಡಿ, ಚಿಕಿತ್ಸೆಗೆ ಹೊಸ ಮಾರ್ಗಸೂಚಿ ಸಿದ್ಧಪಡಿಸುವಂತೆಯೂ ನಿರ್ದೇಶನ ನೀಡಿದರು.
Related Articles
Advertisement
ಈ ಎಲ್ಲಅಂಶಗಳ ಬಗ್ಗೆ ಉತ್ತರ ಹುಡುಕುವಂತೆ ತಜ್ಞವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದುತಿಳಿಸಿದರು.ಕಳೆದ ಏಳು ದಿನಗಳಲ್ಲಿ ಏಳು ನೂರು ಬ್ಲ್ಯಾಕ್‌ಫಂಗಸ್ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ.ಪ್ರಸ್ತುತ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆಪಡೆಯುತ್ತಿರುವ ಬಹುತೇಕ ರೋಗಿಗಳ ಸಣ್ಣಪುಟ್ಟಆಸ್ಪತ್ರೆಗಳಿಂದ ರೆಫರ್ ಆಗಿ ಬಂದಿದ್ದಾರೆ. ಇವರನ್ನುರೆಫರ್ ಮಾಡಿದ ಆಸ್ಪತ್ರೆಗಳ ವ್ಯವಸೆಯನ್ನು ಪರಿಶೀಲನೆ ಮಾಡುವಂತೆ ತಜ್ಞರಿಗೆ ತಿಳಿಸಲಾಗಿದೆಎಂದರು.
ರೋಗಿಗಳಿಗೆ ಆಸ್ಪತ್ರೆಗಳು ಎಷ್ಟು ಸುರಕ್ಷಿತ ಎಂಬಬಗ್ಗೆ ನಾವು ಖಾತರಿ ಮಾಡಿಕೊಳ್ಳಬೇಕಿದೆ. ಎಲ್ಲಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸಾ ಶಿಷ್ಟಾಚಾರವನ್ನು ಚಾಚೂ ತಪ್ಪದೆ ಪಾಲಿಸಲಾಗಿದೆಯಾ, ಬ್ಲ್ಯಾಕ್‌ಫಂಗಸ್‌ಪೀಡಿತರಿಗೆಗುಣಮಟ್ಟದಚಿಕಿತ್ಸೆ ಲಭ್ಯವಿದೆಯಾ, ಸರ್ಕಾರ ನೀಡುತ್ತಿರುವ ಸವಲತ್ತು ಪರಿಣಾಮಕಾರಿಯಾಗಿ ಬಳಕೆ ಆಗುತ್ತಿವೆಯಾ ಎಂಬ ಬಗ್ಗೆಪರಿಶೀಲಿಸಲು ತಿಳಿಸಲಾಗಿದೆ ಎಂದು ಹೇಳಿದÃು.ಸೋಮವಾರದಿಂದಲೇ ತಜ್ಞರ ತಂಡಗಳುಅಧ್ಯಯನ ನಡೆಸಿ ಅತಿ ಶೀಘ್ರದಲ್ಲಿಯೇ ವರದಿ ನೀಡಲಿವೆ.
ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಉಪೇಕ್ಷೆ ಮಾಡುವ ಪ್ರಶ್ನೆ ಇಲ್ಲ ಎಂದು ಹೇಳಿದರು.ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್, ಕೋವಿಡ್‌ಚಿಕಿತ್ಸೆ ಶಿಷ್ಟಾಚಾರ ಸಮಿತಿ ಅಧ್ಯಕ್ಷಡಾ.ಸಚ್ಚಾದಾನಂದ, ಸದಸ್ಯರಾದ ಡಾ.ರವಿ,ಡಾ.ಶಶಿಭೂಷಣ, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಶಿಷ್ಟಾಚಾರ ಸಮಿತಿ ಅಧ್ಯಕ್ಷೆ ಡಾ.ಅಂಬಿಕಾ, ಕ್ಯಾನ್ಸರ್‌ತಜ್ಞ ಡಾ.ವಿಶಾಲ್ ರಾವ್, ಆರೋಗ್ಯ ಇಲಾಖೆನಿರ್ದೇಶಕ ಡಾ.ಓಂಪ್ರಕಾಶ್ ಪಾಟೀಲ್ ಇದ್ದರು.