Advertisement
ಬಾಗಲಕೋಟೆ: ಬ್ಲ್ಯಾಕ್ ಫಂಗಸ್ ಹೊಸ ರೋಗವಲ್ಲ. ಇದು ಹಿಂದೆಯೂ ಇತ್ತು. ಮುಂದೆಯೂ ಇರುತ್ತದೆ. ಇದಕ್ಕೆ ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ಇನ್ನೆರಡು ದಿನಗಳಲ್ಲಿ ಜಿಲ್ಲೆಗೆ ಔಷಧ ಪೂರೈಕೆಯಾಗಲಿದ್ದು, ಜಿಲ್ಲೆಯಲ್ಲಿ ಈ ರೋಗಕ್ಕೆ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.
Related Articles
Advertisement
ನಿತ್ಯ 2 ಸಾವಿರ ಪರೀಕ್ಷೆ: ಪ್ರತಿದಿನ 2 ಸಾವಿರಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಕೋವಿಡ್ ಸ್ಯಾಂಪಲ್ ತೆಗೆಯಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎ.ಎನ್ .ದೇಸಾಯಿ ಸಭೆಗೆ ತಿಳಿಸಿದಾಗ ಸ್ಯಾಂಪಲ್ ತೆಗೆದ ತಕ್ಷಣ ಪರೀಕ್ಷೆಗೆ ಕಳುಹಿಸದೇ 5-6 ದಿನಗಳ ಕಾಲ ತಮ್ಮಲ್ಲಿಯೇ ಇಟ್ಟುಕೊಳ್ಳುತ್ತಿದ್ದಾರೆ. ಇದರಿಂದ ಪರೀಕ್ಷೆ ತಡವಾಗುತ್ತಿರುವುದರಿಂದ ಸೋಂಕು ಹರಡಲು ಅವಕಾಶ ಕೊಟ್ಟಂತಾಗುತ್ತದೆ. ಈ ಬಗ್ಗೆ ಕ್ರಮ ವಹಿಸುವಂತೆ ರಾಜ್ಯ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ನಮ್ಮ ಗಮನಕ್ಕೂ ಬಂದಿದ್ದು, ಮುಂದೆ ಈ ರೀತಿಯಾಗದಂತೆ ನಿಗಾ ವಹಿಸಲು ನಿರ್ದೇಶನ ನೀಡುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ.ರಾಜೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಬರುತ್ತಿದ್ದು, ಈಗಾಗಲೇ ಮೊದಲನೇ ಡೋಸ್ ಪಡೆದವರಿಗೆ ಎರಡನೇ ಡೋಸ್‌ಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಅಲ್ಲದೇ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೂ ಸಹ ಲಸಿಕೆ ನೀಡಲಾಗುತ್ತಿದ್ದು, 18ರಿಂದ 44 ವರ್ಷದೊಳಗಿನ ವಯೋಮಾನದವರಿಗೆ ಮುಂಚೂಣಿಯಲ್ಲಿರುವ ಕಾರ್ಯಕರ್ತರಿಗೆ ಮಾತ್ರ ಮೊದಲ ಡೋಸ್ ನೀಡಲಾಗುತ್ತಿದೆ. ಆದರೆ, ಸಾಮಾನ್ಯ ಜನರಿಗೆ ಲಸಿಕೆ ನೀಡುವದನ್ನು ಸರಕಾರದ ಆದೇಶದನ್ವಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು. ಸಂಸದ ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಪಂ ಸಿಇಒ ಟಿ.ಭೂಬಾಲನ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ|ವಿಜಯ ಕಂಠಿ, ತಹಶೀಲ್ದಾರ್ ಗುರುಸಿದ್ದಯ್ಯ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.