Advertisement
ಜಿಲ್ಲೆಯ ಶಿಡ್ಲಘಟ್ಟ ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳನ್ನು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಬ್ಬರಿಗೆ ಬ್ಲ್ಯಾಕ್ ಫಂಗಸ್ ಲಕ್ಷಣ ಕಂಡುಬಂದಿದ್ದು ಅವರನ್ನು ತ್ವರಿತವಾಗಿ ಚಿಕಿತ್ಸೆ ಒದಗಿಸಲು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದರಲ್ಲದೆ, ಜಿಲ್ಲೆಯಲ್ಲಿ ಇಂತಹ ಲಕ್ಷಣಗಳು ಕಂಡು ಬಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
Related Articles
Advertisement
ಪ್ರತಿ ತಾಲೂಕುಗಳಿಗೆ ಎರಡು ಬಸ್ ಸೌಲಭ್ಯ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕಿತರಿಗೆ ಸೂಕ್ತ ರೀತಿಯ ಚಿಕಿತ್ಸೆ ಕಲ್ಪಿಸುವ ಉದ್ದೇಶದಿಂದ ಜಿಲ್ಲಾಡಳಿತ ಈಗಾಗಲೇ 10 ಸಾವಿರ ಬೆಡ್‍ಗಳ ವ್ಯವಸ್ಥೆ ಮಾಡಿಕೊಂಡಿದ್ದು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಮನೆಯಲ್ಲಿ ಪ್ರತ್ಯೇಕ ಕೊಠಡಿ ಮತ್ತು ಶೌಚಾಲಯದ ವ್ಯವಸ್ಥೆ ಇರುವುದಿಲ್ಲವೆಂದು ಖಾತ್ರಿ ಆದರೇ ತಕ್ಷಣ ಅವರನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಲು ಪ್ರತಿಯೊಂದು ತಾಲೂಕು ಕೇಂದ್ರಗಳಿಗೆ ತಲಾ 2 ಬಸ್‍ಗಳ ಸೌಲಭ್ಯವನ್ನು ಒದಗಿಸಲಾಗಿದೆ ಆದಿಚುಂಚನಗಿರಿ ಮಠದ 6 ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಟ್ರಸ್ಟ್ ಮೂಲಕ 6 ಬಸ್‍ಗಳ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತುರ್ತು ವಾಹನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಚಾರದಲ್ಲಿ ಯಾವುದೇ ರೀತಿಯ ತೊಂದರೆ ಆಗಬಾರದೆಂದು ಈಗಾಗಲೇ ಪ್ರತಿ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ತುರ್ತು ವಾಹನಗಳ ಸೌಲಭ್ಯವನ್ನು ಒದಗಿಸಲಾಗಿದೆ ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಕೋವಿಡ್ ಸೋಂಕಿತರಿಗೆ ಮೆಡಿಕಲ್ ಕಿಟ್ ಅಭಾವ ಆಗದಂತೆ ಎಚ್ಚರಿವಹಿಸಲು ಕಟ್ಟುನಿಟ್ಟಿನಿಂದ ನಿರ್ದೇಶನ ನೀಡಲಾಗಿದೆ 20 ದಿನಗಳಿಗೆ ಆಗುವ ಔಷಧಿಗಳನ್ನು ಮೀಸಲಿಡಲು ತಾಕೀತು ಮಾಡಿ ಸ್ಥಳೀಯ ಮಟ್ಟದಲಲಿ ಅಗತ್ಯ ಔಷಧಿಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಇನ್ನು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿಕೋವಿಡ್ ಸೋಂಕು ತಡೆಗಟ್ಟಲು ರಚಿಸಿರುವ ಕೊರೊನಾ ಕಾರ್ಯಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಕಾರ್ಯಪಡೆಗಳ ಸದಸ್ಯರು ವಾಟ್ಸ್ಯಾಪ್ ಗ್ರೂಪ್ ಮಾಡಿಕೊಂಡು ಅಗತ್ಯ ಸೇವೆಗಳನ್ನು ಒದಗಿಸಲಾಗುತ್ತದೆ ಹಾಗೂ ಪ್ರತಿ ದಿನ ಕೊರೊನಾ ಸೋಂಕಿತರ ಮನೆಗಳಿಗೆ ತೆರಳಿ ಅವರ ಆರೋಗ್ಯವನ್ನು ವಿಚಾರಿಸುವ ಕೆಲಸವನ್ನು ಮಾಡುತ್ತಿದ್ದೇವೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಲಾಕ್ ಡೌನ್ ಮುಂದುವರಿಕೆ ಬಗ್ಗೆ ಮೇ.23ರಂದು ಸಿಎಂ ನಿರ್ಧಾರ: ಡಿಸಿಎಂ ಅಶ್ವಥ್ ನಾರಾಯಣ್
ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ರೇಷ್ಮೆ ಗೂಡು ನಾಶವಾಗುತ್ತದೆ ಎಂಬ ದೃಷ್ಠಿಕೋನದಿಂದ ಶಿಡ್ಲಘಟ್ಟದ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಕೇವಲ 2 ಗಂಟೆಯ ಕಾಲ ವ್ಯಾಪಾರ ಮತ್ತು ವಹಿವಾಟಿಗೆ ಅವಕಾಶ ಕಲ್ಪಿಸಿದ್ದೇವೆ ನಾನು ಸಹ ಕೋವಿಡ್ ಸೋಂಕು ನಿಯಂತ್ರಿಸಲು ಮಾರುಕಟ್ಟೆ ಬಂದ್ ಸೂಕ್ತ ಅಂದುಕೊಂಡಿದ್ದೆ ಆದರೆ ರೇಷ್ಮೆ ಬೆಳೆಗಾರರಿಗೆ ತೊಂದರೆ ಆಗಬಾರದೆಂಬ ಕಾರಣದಿಂದ ವ್ಯಾಪಾರ ವಹಿವಾಟಿಗೆ ಅವಕಾಶ ಒದಗಿಸಲಾಗಿದೆಯೆಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ರಘುನಂದನ್,ತಾಲೂಕು ನೋಡಲ್ ಅಧಿಕಾರಿ ಮೊಹ್ಮದ್ ಅತೀಖ್‍ಉಲ್ಲಾ ಶರೀಫ್,ಶಿಡ್ಲಘಟ್ಟ ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಪಂ ಇಓ ಚಂದ್ರಕಾಂತ್, ನಗರಸಭೆಯ ಪೌರಾಯುಕ್ತ ಶ್ರೀನಿವಾಸ್,ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ,ಶಿಡ್ಲಘಟ್ಟ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ.ಮುರಳಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಪಿಡಿಓಗಳು, ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಆರ್.ಲತಾ ಅವರು ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕೋವಿಡ್ ಸೋಂಕಿತರ ಯೋಗಕ್ಷೇಮವನ್ನು ವಿಚಾರಿಸಿದರು
ಇದನ್ನೂ ಓದಿ : ಯಾಸ್ ಚಂಡಮಾರುತ : ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಿ : ಅಧಿಕಾರಿಗಳಿಗೆ ದೀದಿ ಸೂಚನೆ