Advertisement

ಬ್ಲಾಕ್ ಫಂಗಸ್  : ವಿಜಯಪುರದಲ್ಲಿ ಮೂವರು ರೋಗಿಗಳು ಗುಣಮುಖ

08:17 PM May 20, 2021 | Team Udayavani |

ವಿಜಯಪುರ : ಕೋವಿಡ್ ಕಾಯಿಲೆಗೆ ತುತ್ತಾಗಿ ಗುಣಮುಖರಾಗಿದ್ದ ವ್ಯಕ್ತಿಗಳಲ್ಲಿ ಕಾಣಿಸಿಕೊಳ್ಳುವ ಬ್ಲಾಕ್ ಫಂಗಸ್ ಕಾಯಿಲೆಗೆ ವಿಜಯಪುರ ಜಿಲ್ಲೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.

Advertisement

ನಗರದ  ಬಿ.ಎಲ್.ಡಿ.ಇ. ಸಂಸ್ಥೆಯ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಇದಕ್ಕಾಗಿ ಪ್ರತ್ಯೇಕ ವಾರ್ಡ್ ಆರಂಭಿಸಲಾಗಿದೆ. ಸದರಿ ಬ್ಲ್ಯಾಕ್ ಫಂಗಸ್ ರೋಗಿಗಳಲ್ಲಿ ಮೂವರು ಯಶಸ್ವಿ ಚಿಕಿತ್ಸೆಯಿಂದ ಮನೆಗೆ ಮರಳಿದ್ದಾರೆ ಎಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಆರ್.ಎಸ್.ಮುಧೋಳ ಹೇಳಿದ್ದಾರೆ.

ನೆರೆಯ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ, ಕಲಬುರಗಿ, ಬಾಗಲಕೋಟ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 25 ರೋಗಿಗಳು ಇಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇದರಲ್ಲಿ ಬುಧವಾರ ಸದರಿ ರೋಗ ಪೀಡಿತರಲ್ಲಿ ಮೂವರು ಗುಣಮುಖರಾಗಿ ಮನೆಗೆ ಮರಳಿದ್ದು, 6 ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬ್ಲಾಕ್ ಫಂಗಸ್ ರೋಗಿಗಳ ಚಿಕಿತ್ಸೆಗೆ ಅಗತ್ಯ ಇರುವ ಆಂಪೊಟೆರಿಸಿನ್ ಔಷಧಿ ಪೂರೈಕೆ ಸರ್ಕಾರದ ನಿಯಂತ್ರಣದಲ್ಲಿದೆ. ಹೀಗಾಗಿ ಅಗತ್ಯ ಪ್ರಮಾಣದಲ್ಲಿ ಆಂಪೋಟರಿಸಿಸ್ ಔಷಧಿ ಪೂರೈಕೆ ಆಗುತ್ತಿಲ್ಲ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಸದರಿ ಔಷಧಿಯನ್ನು ಪೂರೈಸಿದರೆ, ಚಿಕಿತ್ಸೆ ಪರಿಣಾಮಕಾರಿ ಆಗುವ ಜೊತೆಗೆ, ರೋಗಿಗಳಿಗೆ ಸಹಕಾರಿ ಆಗಲಿದೆ. ಎಂದು ಬಿ.ಎಂ.ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಪ್ರಾಚಾರ್ಯ ಡಾ.ಅರವಿಂದ ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next