Advertisement

ಕನ್ನಡ ಒಕ್ಕೂಟದಿಂದ ಮೋದಿಗೆ ಕಪ್ಪುಪಟ್ಟಿ ಪ್ರತಿಭಟನೆ

06:40 AM Feb 04, 2018 | Team Udayavani |

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸುವಂತೆ ಆಗ್ರಹಿಸಿ ಭಾನುವಾರ ಕರಾಳ ದಿನ ಆಚರಿಸಲಿರುವ ಕನ್ನಡ ಒಕ್ಕೂಟ, ನಗರಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಪ್ಪುಬಾವುಟ ಪ್ರದರ್ಶನ ಮಾಡಲಿದೆ.

Advertisement

ಬೆಳಿಗ್ಗೆ 11ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಎಲ್ಲ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸಮಾವೇಶಗೊಳ್ಳಲಿದ್ದಾರೆ. ಅಲ್ಲಿಂದ ಕಪ್ಪುಪಟ್ಟಿ ಕಟ್ಟಿಕೊಂಡು ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶಕ್ಕೆ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಅಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ವಾಟಾಳ್‌ ನಾಗರಾಜ್‌ ಸಂಪೂರ್ಣ ಕಪ್ಪುಬಟ್ಟೆ ಧರಿಸಿಕೊಂಡು ಭಾಗವಹಿಸಲಿದ್ದಾರೆ. ಈ ಮೂಲಕ ಕರಾಳ ದಿನ ಆಚರಿಸಲಾಗುವುದು ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next