ಹೊಸದಿಲ್ಲಿ/ಮುಂಬಯಿ: ರಾಷ್ಟ್ರ ರಾಜಧಾನಿಯಲ್ಲಿರುವ ಇಸ್ರೇಲ್ ರಾಯ ಭಾರ ಕಚೇರಿ ಮತ್ತು ಮುಂಬಯಿಯಲ್ಲಿ ಆರ್‌ಬಿಐ, ಎಚ್‌ಡಿಎಫ್ಸಿ ಹಾಗೂ ಐಸಿಐಸಿಐ ಬ್ಯಾಂಕ್ ಸೇರಿದಂತೆ ಮುಂಬ ಯಿಯ 11 ಪ್ರಮುಖ ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು ಶೋಧ ಕಾರ್ಯ ನಡೆಸಿದ ಸಂದರ್ಭದಲ್ಲಿ ಯಾವುದೇ ಅಪಾಯಕಾರಿ ವಸ್ತು ಕಂಡು ಬಂದಿರಲಿಲ್ಲ. ಇಮೇಲ್‌ನಲ್ಲಿ ಆರ್‌ಬಿಐ ಮತ್ತು ಕೆಲವು ಖಾಸಗಿ ಬ್ಯಾಂಕ್‌ಗಳು ಸೇರಿ ದೇಶದಲ್ಲಿ ಅತೀದೊಡ್ಡ ಹಗರಣ ನಡೆಸಿದ್ದಾರೆ. ಅದರಲ್ಲಿ ಶಕ್ತಿಕಾಂತ್ ದಾಸ್ ಹಾಗೂ ವಿತ್ತ ಸಚಿವೆ ನಿರ್ಮಲಾ ಅವರ ಪಾತ್ರವೂ ಇದೆ. ಈ ಹಿನ್ನೆಲೆಯಲ್ಲಿ ಆ ಇಬ್ಬರೂ ರಾಜೀನಾಮೆ ನೀಡಬೇಕು ಇಲ್ಲದಿದ್ದರೆ ಬಾಂಬ್ ಸ್ಫೋಟಿಸಲಾಗುವುದು ಎಂದು ಉಲ್ಲೇಖೀಸಲಾಗಿತ್ತು.
ಇಸ್ರೇಲ್ ರಾಯಭಾರ ಕಚೇರಿಯಲ್ಲಿ “ಸ್ಫೋಟ’
ಹೊಸ ದಿಲ್ಲಿಯ ಇಸ್ರೇಲ್ ರಾಯಭಾರ ಕಚೇರಿಯಲ್ಲಿ ಸಣ್ಣ ಮಟ್ಟಿನ “ಸ್ಫೋಟ’ ಸಂಭವಿಸಿದ್ದು ಯಾರಿಗೂ ಯಾವುದೇ ಅಪಾಯವಾಗಿಲ್ಲ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತತ್‌ಕ್ಷಣ ಸ್ಥಳಕ್ಕೆ ದೌಡಾಯಿಸಿದರು. ಬಿರುಸಿನ ಶೋಧ ನಡೆಸಿದ ಬಳಿಕ ಅಲ್ಲಿ ಯಾವುದೇ ಅಪಾಯಕಾರಿ ವಸ್ತು ಕಂಡು ಬಂದಿಲ್ಲ. ಘಟನೆ ಸಂಬಂಧ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.