Advertisement

ಕುಳಲಿ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾರೀ ಸ್ಫೋಟ; ನಾಲ್ವರು ಛಿದ್ರ

01:32 PM Dec 16, 2018 | Team Udayavani |

ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ರುವ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದ್ದು  ನಾಲ್ವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತದಲ್ಲಿ  ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಘಟಕ ಛಿದ್ರಗೊಂಡಿದ್ದು, ಭೀಕರ ದೃಶ್ಯಗಳಿಗೆ ಸಾಕ್ಷಿಯಾಗಿದೆ. 

Advertisement

ನಾಲ್ವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಎಲ್ಲರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಘಟಕ ಬಿಜೆಪಿ ಶಾಸಕ ಮುರುಗೇಶ್‌ ನಿರಾಣಿ ಅವರ ಒಡೆತನಕ್ಕೆ ಸೇರಿದ್ದಾಗಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು  ಸ್ಫೋಟದ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.  

ಮುಧೋಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next