ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಿಯೋಜಿತ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಮನವಿ ಮಾಡಿದರು.
Advertisement
ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಕೇವಲಭರವಸೆಗಳನ್ನು ನೀಡುತ್ತಾ ಜನರಿಗೆ ಟೋಪಿ ಹಾಕಲಾಗುತ್ತಿದೆ ಎಂದು ಆರೋಪಿಸಿದರು. 2009ರಲ್ಲಿ 26,000 ಮತಗಳನ್ನು ಹಾಗೂ 2013ರಲ್ಲಿ 43,600 ಮತಗಳನ್ನು ಪಡೆದು ಸೋತಿದ್ದೇನೆ.
ಮುಂದಿನ ಬಾರಿ ನೀನು ಗೆಲ್ಲುವೆ ಎಂದು ಹೇಳಿದ್ದಾರೆ. ನನ್ನ ತಂದೆಯವರಾದ ರಾಜಾ ಅಂಬಣ್ಣ ನಾಯಕರು 1978ರಲ್ಲಿ ಶಾಸಕರಾಗಿ ಹಾಗು 1979ರಲ್ಲಿ ಸಚಿವರಾಗಿ ಜನರ ಸೇವೆ ಮಾಡಿದ್ದಾರೆ. ಅವರ ಹೆಸರು ಉಳಿಸುವ ಉದ್ದೇಶದಿಂದ
ಮತ್ತೆ ಚುನುವಾಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ರೈತರನ್ನು ಸಂಪೂರ್ಣ ಕಡೆಗಣಿಸಿವೆ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ತಾಲೂಕಿನ ಕೊನೆ ಭಾಗದ ರೈತರಿಗೆ ನೀರು ನೀಡುವಲ್ಲಿ ಸ್ಥಳೀಯ ಶಾಸಕರು ಹಾಗೂ ಕಾಡಾ ಅಧ್ಯಕ್ಷರಾಗಿರುವ ಹಂಪಯ್ಯ ನಾಯಕ ವಿಫಲರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನೂರು ದಿನಗಳಲ್ಲಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದರು. ಆದರೆ ಐದು ವರ್ಷವಾದರೂ ಕೆರೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಟೀಕಿಸಿದರು.