ಮೈಸೂರು: ರಕ್ತದಾನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕನ್ನಡಹಬ್ಬ ಕಾರ್ಯಕ್ರಮದ ಅಂಗವಾಗಿ ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹಾಗೂ ಡಿಯರ್ ಲೈಫ್ ಎಂಪವರ್ ಇಂಡಿಯಾ ಸಂಸ್ಥೆ ವತಿಯಿಂದ ಜಾಥಾ ನಡೆಸಲಾಯಿತು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟ ಜಾಥಾದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಸಂಘದ ಸದಸ್ಯರು, ರಕ್ತದಾನದ ಕುರಿತು ಜಾಗೃತಿ ಮೂಡಿಸುವ ವಿವಿಧ ಘೋಷಣಾ ಫಲಕಗಳನ್ನು ಹಿಡಿದು ಹೆಜ್ಜೆ ಹಾಕಿದರು.
ನಂತರ ಗೋವರ್ಧನ್ ಹೋಟೆಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕನ್ನಡ ಹಬ್ಬ ಕಾರ್ಯಕ್ರಮದ ಮೂಲಕ ರಕ್ತದಾನ ಕಾರ್ಯಕ್ರಮ ನಡೆಸುತ್ತಿರುವುದು ಅನಾರೋಗ್ಯಕ್ಕೆ ತುತ್ತಾದವರಿಗೆ ಸಹಾಯವಾಗಲಿದೆ.
ಹೀಗಾಗಿ ಕನ್ನಡ ರಾಜ್ಯೋತ್ಸವವನ್ನು ನವೆಂಬರ್‌ಗೆ ಮಾತ್ರ ಸೀಮಿತಗೊಳಿಸದೆ, ವರ್ಷವಿಡಿ ನಡೆಸಬೇಕಿದೆ. ಆ ಮೂಲಕ ಬಡವರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ನಡೆಸಬೇಕಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ 70 ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕೆ.ಮಂಜುನಾಥ್, ಸಿದ್ದರಾಮು, ಬಿ.ಗಣೇಶ್, ಮಂಜುನಾಥ್, ಗುರುಪಾದ್‌ಭಟ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಪಾಲಿಕೆ ಸದಸ್ಯೆ ಶೋಭಾ ಸುನೀಲ್, ಎಪಿಎಂಸಿ ಅಧಿಕಾರಿ ಪ್ರಭುಸ್ವಾಮಿ, ಕನ್ನಡ ರಕ್ಷ$ಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ.ಕೃಷ್ಣೇಗೌಡ, ಜಿಲ್ಲಾಧ್ಯಕ್ಷ ಎಂ.ಪಿ.ಜಗದೀಶ್, ಕಾವೇರಮ್ಮ, ಕೇಬಲ್ ರವಿ ಇತರರಿದ್ದರು.