Advertisement
ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೀಸಲು ಸೌಲಭ್ಯಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ಉಪವಾಸ ಚಳವಳಿ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಖುದ್ದಾಗಿ ಶ್ರೀಗಳಿಗೆ ಕರೆ ಮಾಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಕೊಟ್ಟ ಮಾತು ಉಳಿಸಿಕೊಳ್ಳುವ ನಿರೀಕ್ಷೆ ಇದೆ ಎಂದರು.
Related Articles
Advertisement
ಸರ್ಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಂಚಮಸಾಲಿ ಸಮಾಜವನ್ನು 2ಎ ಮೀಸಲು ಕಲ್ಪಿಸದಿದ್ದಲ್ಲಿ 2021 ಜನವರಿ 14 ರಿಂದ ಪಂಚಲಕ್ಷ ಪಾದಯಾತ್ರೆ ಆರಂಭಿಸಲಿದ್ದೇವೆ. ಕೂಡಲಸಂಗಮ ಕ್ಷೇತ್ರದಿಂದ ಬೆಂಗಳೂರು ವರೆಗೆ ಪಾದಯಾತ್ರೆ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದೇವೆ. ಇಷ್ಟಾದರೂ ನ್ಯಾಯ ಸಮ್ಮತ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಸರ್ಕಾರ ಬರುವ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಲಿದೆ ಎಂದು ಎಚ್ಚರಿಸಿದರು.
ಬೆಂಗಳೂರಿನ ಸುಂಕದಕಟ್ಟೆಯ ಆಶ್ರಯ ಆಸ್ಪತ್ರೆ, ವಿಜಯಪುರದ ಶ್ರೀಸಾಯಿ ಆಸ್ಪತ್ರೆ, ಬಾಗಲಕೋಟೆಯ ಗುರುನಾಥ ಆಸ್ಪತ್ರೆ, ಬೆಳಗಾವಿಯ ವಿಜಯ ಆಸ್ಪತ್ರೆ, ಗದಗ ಜಿಲ್ಲೆಯ ಗಜೇಂದ್ರಗಡ, ಕಲಬುರಗಿ, ಕೊಪ್ಪಳ ಸೇರಿದಂತೆ ಇತರೆ ಜಿಲ್ಲೆಗಳ ರಕ್ತ ದಾಸೋಹ ಚಳವಳಿಗೆ ಸಿದ್ಧತೆ ನಡೆದಿದೆ ಎಂದು ವಿವರಿಸಿದರು.
ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ, ಡಾ.ಸಿ.ಎಸ್.ಸೋಲಾಪುರ, ಲತಾ ಬಿರಾದಾರ, ಜಿ.ಎಸ್.ಮಹಿಶಾಲೆ, ಈರಣ್ಣ ಶಿರಮಗೊಂಡ, ದಾನೇಶ ಅವಟಿ, ಶ್ರೀಶೈಲ ಬುಕ್ಕಣ್ಣಿ, ಶಂಕರಗೌಡ ಬಿರಾದಾರ ಇತರರು ಉಪಸ್ಥಿತರಿದ್ದರು.