Advertisement

ಪ್ರಧಾನಿ ಮೋದಿಯವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ; ರಾಹುಲ್, ಕೇಜ್ರಿವಾಲ್ ಶುಭಾಶಯ

11:12 AM Sep 17, 2020 | Nagendra Trasi |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ (ಸೆ.17, 2020) 70ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ.

Advertisement

“ವಿಶ್ ಯೂ ವೆರಿ ಹ್ಯಾಪಿ ಬರ್ತ್ ಡೇ ಸರ್, ನಾನು ನಿಮ್ಮ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬಕ್ಕೆ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವಾರು ಗಣ್ಯರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:10 ಸಾವಿರ ವರ್ಷಗಳ ಹಿಂದಿನ ಕೆರೆಗೆ ಕಾಯಕಲ್ಪ

ಆ ಪ್ರಯುಕ್ತ ಕೊಯಮತ್ತೂರಿನ ಬಿಜೆಪಿ ಕಾರ್ಯಕರ್ತರು ಬುಧವಾರ ಶಿವನ್‌ ಕಾಮಾಚಿ ಅಮ್ಮನ್‌ ದೇಗುಲದಲ್ಲಿ 70 ಕೆ.ಜಿ. ಲಡ್ಡುವನ್ನು ದೇವರಿಗೆ ನೈವೇದ್ಯದ ರೂಪದಲ್ಲಿ ಸಮರ್ಪಿಸಿದ್ದಾರೆ. ಆನಂತರ, ಅದನ್ನು ಭಕ್ತಾದಿಗಳಿಗೆ ಪ್ರಸಾದದ ರೂಪದಲ್ಲಿ ವಿತರಿಸಲಾಗಿದೆ.

Advertisement

 

ಲಡ್ಡು ವಿತರಣೆಗೂ ಮೊದಲು ದೇಗುಲದ ಬಳಿ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಆನಂತರ ದೇಗುಲ ಪವೇಶಿಸಿ ಪ್ರಧಾನಿಯವರ ಶ್ರೇಯಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿಯವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸಾಮಾಜಿಕ ಸೇವೆಯಲ್ಲಿ ಬಿಜೆಪಿ ಕಾರ್ಯಕರ್ತರು ತೊಡಗಿಸಿಕೊಂಡಿದ್ದರು.

ಬಡವರಿಗೆ ದಿನಸಿ ಹಂಚುವುದು, ರಕ್ತದಾನ ಶಿಬಿರ ,ಕಣ್ಣಿನ ತಪಾಸಣೆ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಹಲವಾರು ಜನೋಪಯೋಗಿ ಸೇವೆಗಳನ್ನು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next