ಕೊಣಾಜೆ: ರಕ್ತದಾನ ಸೌಹಾರ್ದತೆಯ ಸಂಕೇತ.ರಕ್ತದಾನ ಮಾಡುವುದಕ್ಕೆ ಯಾವುದೇ ಜಾತಿ ಮತದ ಭೇದವಿಲ್ಲ ಎಂದು ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಪ್ರಾಂಶುಪಾಲ ಡಾ| ಅಬ್ದುಲ್ ಶರೀಫ್ ಹೇಳಿದರು.
ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ರಾಷ್ಟ್ರೀಯ ಸೇವಾ ಯೋಜನ ಘಟಕ ಮತ್ತು ಯೆನಪೋಯ ಆಸ್ಪತ್ರೆ ದೇರಳಕಟ್ಟೆ ರಕ್ತನಿಧಿ ಇದರ ಆಶ್ರಯದಲ್ಲಿ ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಏರ್ಪಡಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ತದ ಆವಶ್ಯಕತೆ ಇರುವವರಿಗೆ ರಕ್ತದಾನ ಮಾಡುವುದರಿಂದ ಮಾನವೀಯ ಮೌಲ್ಯಗಳಿಗೆ ನ್ಯಾಯ ಒದಗಿಸಿದಂತಾ ಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಪಿ.ಎ. ಪಾಲಿ ಟೆಕ್ನಿಕ್‌ನ ಪ್ರಾಂಶುಪಾಲ ಪ್ರೊ| ಕೆ. ಪಿ. ಸೂಫಿ ಮಾತನಾಡಿ, ರಕ್ತದಾನ ಮಹಾದಾನವಾಗಿ ದ್ದು ಕೃತಕವಾಗಿ ಉತ್ಪಾದಿಸಲು ಸಾಧ್ಯ ವಿಲ್ಲದ ಕಾರಣ ತುರ್ತು ರಕ್ತದ ಅಗತ್ಯ ಇರುವವರಿಗೆ ನೀಡುವುದರಿಂದ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದರು.
ಯೆನಪೋಯ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಡಾ|ನಿಶಾ ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿ, ರಕ್ತದಾನದಿಂದ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಎಂಬುದು ತಪ್ಪು ಕಲ್ಪನೆಯಾಗಿದೆ. ರಕ್ತ ದಾನದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಬದಲಾಗಿ ರಕ್ತದಾನದಿಂದ ಆರೋಗ್ಯ ಉತ್ತಮಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲ ಡಾ| ಸಲೀಮುಲ್ಲಾ ಖಾನ್ ಮಾತನಾಡಿ, ಪ್ರಸಕ್ತ ಸಮಾಜದಲ್ಲಿ ರಕ್ತದಾನದ ಆವಶ್ಯಕತೆಯನ್ನು ವಿವರಿಸಿ, ವಿದ್ಯಾರ್ಥಿಗಳು ರಕ್ತದಾನ ಮಾಡುವುದರ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಕಾಲೇಜಿನ ಎನ್ನೆಸ್ಸೆಸ್ ಘಟಕದ ಸಂಯೋಜಕ ಡಾ| ಮುಹಮ್ಮದ್ ಮುಬೀನ್ ಮತ್ತು ದೈಹಿಕ ನಿರ್ದೇಶಕ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು. ಪ್ರೊ| ವಿಜೇತಾ ಪೂಜಾರಿ ವಂದಿಸಿದರು.