Advertisement
ಕುಲಾಲ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಮತ್ತು ರೋಟರಿ ಕ್ಯಾಂಪ್ಕೋ ಬ್ಲಿಡ್ ಬ್ಯಾಂಕ್ ಪುತ್ತೂರು ಸಹಯೋಗದಲ್ಲಿ ಶುಕ್ರವಾರ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರೋಟರಿ ಕ್ಯಾಂಪ್ಕೋ ಬ್ಲಿಡ್ ಬ್ಯಾಂಕ್‌ನಲ್ಲಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಅವರು ಉದ್ಘಾಟಿಸಿದರು. ಸಮಾಜದಲ್ಲಿ ಸಾಕಷ್ಟು ಸಂಘ – ಸಂಸ್ಥೆಗಳು ಬೇರೆ ಬೇರೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿವೆ. ರಕ್ತದಾನ ಶಿಬಿರ ಮತ್ತು ಪರಿಸರ ಸಂರಕ್ಷಣೆ ಕಾರ್ಯಕ್ರಮ ಹಾಕಿಕೊಳ್ಳುವುದು ಅತಿ ಅಗತ್ಯ. ಇದಕ್ಕೆ ಪೂರಕ ಎಂಬಂತೆ ಕುಲಾಲ ಸಮಾಜ ಸೇವಾ ಸಂಘ ಸ್ವಯಂ ಪ್ರೇರಿತ ರಕ್ತದಾನ ಮತ್ತು ಪರಿಸರ ರಕ್ಷಣೆಗೆ ಹೆಚ್ಚು ಆದ್ಯತೆ ನೀಡಿರುವುದು ಅಭಿನಂದನಾರ್ಹ ಎಂದರು.
Related Articles
ರೋಟರಿ ಕ್ಲಬ್ ಅಧ್ಯಕ್ಷ ಹಾಗೂ ಬ್ಲಿಡ್ ಬ್ಯಾಂಕ್ ಮುಖ್ಯಸ್ಥ ವಾಮನ್ ಪೈ ಮಾತನಾಡಿ, ರೋಟರಿ ಕ್ಲಬ್‌ನ ಶ್ರಮದಿಂದಾಗಿ ಪ್ರಸ್ತುತ ರೋಟರಿ ಕ್ಯಾಂಪ್ಕೋ ಬ್ಲಿಡ್ ಬ್ಯಾಂಕ್ ಹೆಮ್ಮರವಾಗಿ ಬೆಳೆದಿದೆ. ಮುಂದೆ ರೋಟರಿಯಿಂದ ಡಯಾಲಿಸಿಸ್ ಘಟಕ ಸ್ಥಾಪನೆಯ ಮಹತ್ವದ ಯೋಜನೆಯನ್ನು ಇಟ್ಟುಕೊಳ್ಳಲಾಗಿದೆ. ರೋಟರಿಯಿಂದ 40 ಲಕ್ಷ ರೂ. ಯೋಜನೆಯಲ್ಲಿ ಡಯಾಲಿಸಿಸ್ ಘಟಕ 6 ತಿಂಗಳೊಳಗೆ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದರು.
Advertisement