ಚಿಕ್ಕಮಗಳೂರು: ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶ ದಿಂದ ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲಿಕರ ಅಸೋಸಿಯೇಷನ್‌ನಿಂದ ಬೇರೆ ಬೇರೆ ರಾಜ್ಯಗಳ ಟ್ರಾವೆಲ್ಸ್ ಏಜೆಸ್ಸಿಯವರಿಗೆ ಜ.21 ರಿಂದ 24ರ ವರೆಗೆ ಪ್ರವಾಸಿ ತಾಣಗಳ ಮಾಹಿತಿ ನೀಡುವ ಬ್ಲಾಸಂ 2020 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಸೋಸಿ ಯೇಷನ್ ಅಧ್ಯಕ್ಷ ಜಯಂತ್ ಪೈ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಪ್ರಾಕೃತಿಕವಾಗಿ ಅನೇಕ ಪ್ರವಾಸಿ ತಾಣಗಳಿಂದ ಕೂಡಿದೆ. ಆದರೆ, ಮಾಹಿತಿ ಕೊರತೆಯಿಂದ ಪ್ರವಾಸಿಗರು ಪ್ರಾಕೃತಿಕ ಸೌಂದರ್ಯ ಸವಿಯದೇ ವಂಚಿತರಾಗುತ್ತಿದ್ದಾರೆ. ಪ್ರವಾಸಿಗರಿಗೆ ಮತ್ತು ಟ್ರಾವೆಲ್ಸ್ ಏಜೆಸ್ಸಿಯವರಿಗೆ ಜಿಲ್ಲೆಯ ಪ್ರವಾಸಿ ತಾಣಗಳನ್ನು ಪರಿಚಯಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ವಿವಿಧ ರಾಜ್ಯಗಳ 80 ಮಂದಿ ಟ್ರಾವೆಲ್ ಏಜೆಸ್ಸಿಯವರನ್ನು ಕರೆಸಿ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುವುದು. ಜಿಲ್ಲೆಗೆಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದರಿಂದ ವಾಣಿಜ್ಯೋದ್ಯಮಕ್ಕೂ ಕೂಡ ಅನುಕೂಲವಾಗಲಿದೆ. ಇದರೊಂದಿಗೆ ಜಿಲ್ಲೆ ದೇಶ ವಿದೇಶದಲ್ಲಿ ಹೆಸರು ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಬೆಳೆಯಬೇಕಾದರೆ ಪ್ರವಾಸೋದ್ಯಮ ಇಲಾಖೆ ಮತ್ತು ಸರ್ಕಾರದ ಹೆಚ್ಚಿನ ನೆರವು ಅಗತ್ಯ. ಪ್ರೇಕ್ಷಣೀಯ ಸ್ಥಳಗಳನ್ನುಅಭಿವೃದ್ಧಿಪಡಿಸುವಂತೆ ಸಚಿವ ಸಿ.ಟಿ.ರವಿ ಅವರಲ್ಲಿ ಮನವಿ ಮಾಡಿಕೊಂಡಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ ಆನಂದ್‌ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪರಮೇಶ್ ಉಪಸ್ಥಿತರಿದ್ದರು