ಬೆಂಗಳೂರು: ಅನ್ಯ ಧರ್ಮದ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗಳಲ್ಲಿ ತೊಡಗಿಸಿಕೊಂಡು ಮತಾಂತರಿಸಲು ಪ್ರಯತ್ನಿಸಿದ ಆರೋಪದಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಶ್ರೀನಗರದ 32 ವರ್ಷದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಕರ್ನಾಟಕ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬಂಧಿತ ಆರೋಪಿ ಮೊಗಿಲ್ ಅಶ್ರಫ್ ಬೇಗ್ ಎಂದು ಗುರುತಿಸಲಾಗಿದ್ದು, ಆತ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. 2018 ರಿಂದ ಸಂತ್ರಸ್ತೆಯ ಪರಿಚಿತನಾಗಿದ್ದು ಆಕೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದ. ಮಹಿಳೆಯೂ ಟೆಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಅವರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಜೋಡಿನ್ಯಾಯಾಲಯದ ಮೂಲಕ ವಿವಾಹವಾಗಲು ಯೋಜಿಸಿದ್ದರು. ಆದರೆ, ನಂತರ ಆರೋಪಿ ಮಹಿಳೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿದ. ಬೇಗ್ ತನ್ನೊಂದಿಗೆ ಲೈಂಗಿಕ ಸಂಭೋಗಕ್ಕೆ ಒಪ್ಪಿಕೊಳ್ಳುವಂತೆ ಮಾಡಲು ಮದುವೆಯ ನೆಪವನ್ನು ಬಳಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ.
ಎಫ್‌ಐಆರ್‌ನಲ್ಲಿ, ಬೇಗ್ ತನ್ನನ್ನು “ಅಸ್ವಾಭಾವಿಕ ಲೈಂಗಿಕ ಕ್ರಿಯೆಗಳಲ್ಲಿ” ತೊಡಗಿಸಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ಆತನ ಸಹೋದರ ಫೋನ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೆಪ್ಟೆಂಬರ್ 6 ರಂದು ಸಂತ್ರಸ್ತೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಾನು ಅತ್ಯಾಚಾರಕ್ಕೊಳಗಾಗಿದ್ದೇನೆ ಮತ್ತು ಬಲವಂತವಾಗಿ ಧಾರ್ಮಿಕ ಮತಾಂತರಕ್ಕೆ ಒಳಗಾಗಿದ್ದೇನೆ ಎಂದು ಪೋಸ್ಟ್ ಮಾಡಿದಾಗ ವಿಷಯ ಬೆಳಕಿಗೆ ಬಂದಿದೆ.
ಬೆಂಗಳೂರು ಪೊಲೀಸರು, ಪ್ರಧಾನಿ ಕಚೇರಿ ಯನ್ನೂ ಟ್ಯಾಗ್ ಮಾಡಿ ಸರ್, ನಾನು ಲವ್ ಜಿಹಾದ್, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಬಲವಂತದ ಧಾರ್ಮಿಕ ಮತಾಂತರಕ್ಕೆ ಬಲಿಯಾಗಿದ್ದೇನೆ. ನನ್ನ ಜೀವಕ್ಕೆ ಅಪಾಯವಿದೆ. ದಯವಿಟ್ಟು ಬೆಂಗಳೂರಿನಲ್ಲಿ ತತ್ ಕ್ಷಣ ನನಗೆ ಪೊಲೀಸ್ ಸಹಾಯವನ್ನು ಒದಗಿಸಿ, ”ಎಂದು ಪೋಸ್ಟ್ ಮಾಡಿದ್ದರು.