Advertisement

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

11:14 AM Nov 28, 2024 | Team Udayavani |

ಬೆಂಗಳೂರು: ನಗರದ ಶಾಲಾ-ಕಾಲೇಜುಗಳು, ಹೋಟೆಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶಗಳ ಬಳಿಕ ಇದೀಗ, ಬ್ಯಾಂಕ್‌ಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶಗಳು ಬರತೊಡಗಿವೆ. ಎಂ.ಜಿ. ರೋಡ್‌ನ‌ಲ್ಲಿರುವ ಎಚ್‌ಎಸ್‌ಬಿಸಿ ಬ್ಯಾಂಕ್‌ ನ ಇ-ಮೇಲ್‌ ವಿಳಾಸಕ್ಕೆ ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ.

Advertisement

ಬೆಳಗ್ಗೆ 10 ಗಂಟೆಗೆ ಬ್ಯಾಂಕ್‌ಗೆ ಬಂದ ಅಧಿಕಾರಿಗಳು, ಇ-ಮೇಲ್‌ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಕಂಡು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬ್ಯಾಂಕ್‌ನ ಅಧಿಕಾರಿ-ಸಿಬ್ಬಂದಿ ಮತ್ತು ಗ್ರಾಹಕರು ಹೊರಗಡೆ ಕಳುಹಿಸಿದ್ದಾರೆ. ಅಕ್ಕ-ಪಕ್ಕ ಮಳಿಗೆಯವರಿಗೂ ಮಾಹಿತಿ ನೀಡಿ, ಅವರನ್ನು ಹೊರಗಡೆ ಕಳುಹಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಲಸೂರು ಪೊಲೀಸರು, ಶ್ವಾನದಳ, ಬಾಂಬ್‌ ನಿಷ್ಕ್ರಿಯ ದಳ ಜತೆ ಇಡೀ ಬ್ಯಾಂಕ್‌ ಹಾಗೂ ಕಟ್ಟಡ ಪರಿಶೀಲಿಸಿದ್ದಾರೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳಾಗಲಿ, ಅನುಮಾನಾಸ್ಪದ ವಸ್ತುಗಳಾಗಲಿ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್‌ ಬೆದರಿಕೆ ಸಂದೇಶ ಎಂಬುದು ಖಾತ್ರಿಯಾಗಿದೆ.

ಈ ಸಂಬಂಧ ಬ್ಯಾಂಕ್‌ನ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ಇ-ಮೇಲ್‌ ವಿಳಾಸ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆದರಿಕೆ ಸಂದೇಶದಲ್ಲಿ ಏನಿತ್ತು?: ಅಪರಿಚಿತ ವ್ಯಕ್ತಿ ದಕ್ಷಿಣ ಭಾರತದ ಪ್ರಧಾನ ಕಚೇರಿಯ ಇ-ಮೇಲ್‌ ವಿಳಾಸಕ್ಕೆ ಸಂದೇಶ ಕಳುಹಿಸಿ, ಬೆಂಗಳೂರು ಸೇರಿ ದೇಶದ ವಿವಿಧೆಡೆ ಇರುವ ನಿಮ್ಮ ಬ್ಯಾಂಕ್‌ ಶಾಖೆಗಳಲ್ಲಿ ಬಾಂಬ್‌ ಇರಿಸಲಾಗಿದೆ. ಬುಧವಾರ ಮಧ್ಯಾಹ್ನದ ಬಳಿಕ ಸ್ಫೋಟಗೊಳ್ಳಲಿದೆ ಎಂದು ಸಂದೇಶ ಕಳುಹಿಸಿದ್ದರು. ಆತಂಕಗೊಂಡ ಅಲ್ಲಿನ ಅಧಿಕಾರಿ, ಈ ಸಂದೇಶವನ್ನು ಕೂಡಲೇ ದೇಶದ ಎಲ್ಲಾ ಬ್ಯಾಂಕ್‌ ಶಾಖೆಗಳು ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next