Advertisement

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

11:23 AM Sep 19, 2024 | Team Udayavani |

ಬೆಂಗಳೂರು: ಮೆಜೆಸ್ಟಿಕ್‌ ಬಳಿಯ ಅಮರ್‌ ಜಂಕ್ಷನ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದು ದಿವ್ಯಾಂಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರ ಠಾಣೆ ವ್ಯಾಪ್ತಿ ಯಲ್ಲಿ ನಡೆದಿದೆ.

Advertisement

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತರಿಗೆ 40 ರಿಂದ 45 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಮಂಗಳವಾರ ರಾತ್ರಿ 11.30ರ ಸುಮಾರಿಗೆ ವ್ಯಕ್ತಿಯೊಬ್ಬರು ಸರ್ವೀಸ್‌ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ಅತೀ ವೇಗವಾಗಿ ಬಂದ ಯಶವಂತಪುರ ಡಿಪೋಗೆ ಸೇರಿದ ಬಸ್‌, ಅಂಗವಿಕಲ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಬಸ್‌ನ ಚಕ್ರಗಳು ಆತನ ತಲೆ ಮತ್ತು ದೇಹದ ಮೇಲೆ ಹರಿದ ಪರಿಣಾಮ ಆತ ಸ್ಥಳದದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಅಂಗವಿಕಲರಾಗಿದ್ದರು. ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ಅವರ ಕುಟುಂಬಸ್ಥರನ್ನು ಪತ್ತೆ ಮಾಡಲಾಗುತ್ತಿದೆ. ಕೃತ್ಯವೆಸಗಿದ ಬಸ್‌ ಚಾಲಕ ಗೋಪಾಲ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಉಪ್ಪಾರಪೇಟೆ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಕ್ಕಿ ಹೊಡೆದರೂ ಬಸ್‌ ನಿಲ್ಲಿಸದ ಚಾಲಕ: ‌

ಘಟನೆ ಸಂಬಂಧ ಬಸ್‌ನ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕ ಮತ್ತು ನಿರ್ವಾಹಕನಿಗೆ ನಿಂದಿಸಿದ್ದಾರೆ. ಅಂಗವಿಕಲ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದರು. ಆದರೆ, ಚಾಲಕ ವೇಗವಾಗಿ ಬಸ್‌ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ವ್ಯಕ್ತಿಗೆ ಬಸ್‌ ಡಿಕ್ಕಿಯಾದರೂ ಬಸ್‌ ಅನ್ನು ನಿಲುಗಡೆ ಮಾಡಲಿಲ್ಲ. ಪ್ರಯಾಣಿಕರು ಕಿರುಚಾಟ ನಡೆಸಿದ ಮೇಲೆ ಬಸ್‌ ನಿಲುಗಡೆ ಮಾಡಲಾಯಿತು ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next