Advertisement

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌

11:45 AM Oct 04, 2017 | Team Udayavani |

ಬೆಂಗಳೂರು: ಬಿಎಂಟಿಸಿ ಬಸ್‌ನ ಚಕ್ರ ಕಳಚಿದ ಘಟನೆ ಹಸಿಯಾಗಿರುವಾಗಲೇ ಕಸ್ತೂರಬಾ ರಸ್ತೆಯಲ್ಲಿ ಮಂಗಳವಾರ ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.  ಘಟನೆಯಲ್ಲಿ ಚಾಲಕನ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್‌ನಲ್ಲಿದ್ದ 15 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಆದರೆ, ಡಿಕ್ಕಿ ರಭಸಕ್ಕೆ ಬಸ್‌ ಮುಂಭಾಗ ನುಜ್ಜುಗುಜ್ಜಾಗಿದ್ದು, ನಿಗಮದ ಕ್ರೇನ್‌ ಸಹಾಯದಿಂದ ಕಾರ್ಯಾಗಾರಕ್ಕೆ ಸಾಗಿಸಲಾಯಿತು. 

Advertisement

ಬೆಳಗ್ಗೆ 11ರ ಸುಮಾರಿಗೆ ಶಿವಾಜಿನಗರದಿಂದ ಕೆ.ಆರ್‌. ಮಾರುಕಟ್ಟೆ ಕಡೆಗೆ ಹೊರಟಿದ್ದ ಬಸ್‌ (ಕೆಎ-57, ಎಫ್-415), ಕಸ್ತೂರಬಾ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಅರ್ಧ ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವರದಿಗೆ ಸೂಚನೆ: ಸ್ಥಳಕ್ಕೆ ಭೇಟಿ ನೀಡಿದ ಬಿಎಂಟಿಸಿ ಅಧ್ಯಕ್ಷ ಎಂ. ನಾಗರಾಜ, ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು, ತಕ್ಷಣ ಕ್ರೇನ್‌ ತರಿಸಿ ಸ್ಥಳದಿಂದ ಬಸ್‌ ತೆರವುಗೊಳಿಸಿದರು. “ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಬಸ್‌ ಪವರ್‌ ಸ್ಟೇರಿಂಗ್‌ ಹೊಂದಿದ್ದು, ಏಕಾಏಕಿ ಲಾಕ್‌ ಆಗಲು ಸಾಧ್ಯವಿಲ್ಲ.

ಹಾಗಾಗಿ, ಘಟನೆ ಕುರಿತು ಸಮಗ್ರ ವರದಿ ನೀಡುವಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು,’ ಎಂದು ನಾಗರಾಜ ತಿಳಿಸಿದರು. ಕಬ್ಬನ್‌ ಪಾರ್ಕ್‌ ಸಂಚಾರ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next