ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳಿಗೆ ಸುರಕ್ಷಿತ ಸಾರಿಗೆ ಸೌಲಭ್ಯ ಒದಗಿಸಲು ಬಿಎಂಟಿಸಿ ವತಿಯಿಂದ ನಿರ್ಭಯ ಯೋಜನೆ ಅಡಿಯಲ್ಲಿ ಪಿಂಕ್ ಸಾರಥಿ ಗಸ್ತು ವಾಹನ ಸಂಚಾರ ಆರಂಭಿಸ ಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ 4.30 ಕೋಟಿ ರೂ. ವೆಚ್ಚದಲ್ಲಿ ಖರೀಧಿಸಿ ರುವ 25 ಪಿಂಕ್ ಸಾರಥಿ ವಾಹನಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಸಿರು ನಿಶಾನೆ ತೋರಿದರು. ಬಿಎಂಟಿಸಿ ವ್ಯಾಪ್ತಿ ಯಲ್ಲಿ ಸಂಚರಿಸುವ ಬಸ್, ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆ ಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸಲು ಪಿಂಕ್ ಸಾರಥಿ ವಾಹನಗಳು ನಿರಂತರ ಕಾರ್ಯಾಚರಣೆ ನಡೆಸುತ್ತವೆ. ಈ ವಾಹನ ಗಳಿಗೆ ಜಿಪಿಎಸ್ ಅಳವಡಿಸ ಲಾಗಿದೆ. ದಿನದ 24 ಗಂಟೆಯೂ ಈ ವಾಹನಗಳು ಕಾರ್ಯಾಚರಣೆ ನಡೆಸುತ್ತಿರುತ್ತವೆ.
•ಮಹಿಳೆಯರು, ಮಕ್ಕಳಿಗೆ ರಕ್ಷಣೆ ಒದಗಿಸುವ ಉದ್ದೇಶ
•ವಿಧಾನಸೌಧದೆದುರು 25 ವಾಹನಗಳಿಗೆ ಚಾಲನೆ ನೀಡಿದ ಸಿಎಂ
•ಬಿಎಂಟಿಸಿಯಿಂದ ನಿರ್ಭಯ ಯೋಜನೆ ಅಡಿ ಸೇವೆ ಆರಂಭ
ನಿರ್ಭಯ ಯೋಜನೆ ಅಡಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 56.07 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಈ ಅನುದಾನದಡಿ ಮಹಿಳೆಯರಿಗೆ ಲಘು ಹಾಗೂ ಭಾರಿ ವಾಹನಗಳ ಚಾಲನಾ ತರಬೇತಿ ನೀಡಿ ಪರವಾನಗಿ ಕೊಡಿಸುವುದು. 1 ಸಾವಿರ ಬಸ್‌ಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸುವುದು. ಸಂಸ್ಥೆಯ 11 ಸಾವಿರ ಸಿಬ್ಬಂದಿಗೆ ಲಿಂಗ ಸಂವೇದನಾ ತರಬೇತಿ ನೀಡುವುದು. ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. 15 ಬಸ್ ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣ. ಪ್ರಮುಖ ಬಸ್ ನಿಲ್ದಾಣಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ. ಮಹಿಳಾ ಪ್ರಯಾಣಿಕರಿಗೆ ಮಹಿಳಾ ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಿಸಲು ಬಿಎಂಟಿಸಿ ನಿರ್ಧರಿಸಿದೆ.