Advertisement
ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9 ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ತಾನು ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿತ್ತು.
Related Articles
Advertisement
ಸರಕಾರಿ ದಾವೆ ವಿಭಾಗದ ಹಂಗಾಮಿ ನಿರ್ದೇಶಕಎಚ್.ಕೆ.ಜಗದೀಶ್ ನೇಮಕ ಹೈಕೋರ್ಟ್‌ನಿಂದ ರದ್ದು
ಬೆಂಗಳೂರು: ಪ್ರಾಸಿಕ್ಯೂಷನ್ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖಾ ನಿರ್ದೇಶನಾಲಯದ ಹಂಗಾಮಿ ನಿರ್ದೇಶಕರಾಗಿದ್ದ ಎಚ್.ಕೆ.ಜಗದೀಶ್ ಅವರ ನೇಮಕಾತಿಯನ್ನು ಹೈಕೋರ್ಟ್ ರದ್ದುಪಡಿಸಿದ್ದು, ನಿಯಮಗಳಿಗೆ ಅನುಗುಣವಾಗಿ ಅರ್ಹರನ್ನು ಕೂಡಲೇ ನೇಮಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ. ಅಪರಾಧ ಪ್ರಕ್ರಿಯಾ ಸಂಹಿತೆ(ಸಿಆರ್‌ಪಿಸಿ) ಹಾಗೂ ಶ್ರೇಣಿ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ 2019ರ ಆ.5ರಂದು ಜಗದೀಶ್ ಅವರನ್ನು ಪ್ರಾಸಿಕ್ಯೂಷನ್ ಮತ್ತು ಸರಕಾರಿ ದಾವೆ ವಿಭಾಗದ ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿರುವುದನ್ನು ವಜಾ ಮಾಡುವಂತೆ ಕೋರಿ ವಕೀಲ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾ| ಎನ್.ವಿ.ಅಂಜಾರಿಯಾ ಮತ್ತು ನ್ಯಾ| ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಭಾಗೀಯ ಪೀಠವು ಪುರಸ್ಕರಿಸಿದೆ. ಸರಕಾರದ ಆದೇಶದ ಪ್ರಕಾರ ಹಂಗಾಮಿ ನಿರ್ದೇಶಕರು 1 ವರ್ಷದ ಬಳಿಕ ಮುಂದುವರಿಯುವಂತಿಲ್ಲ. ಪದೋನ್ನತಿ ಪಡೆಯಲು ಅರ್ಹತೆ ಇಲ್ಲದ ವ್ಯಕ್ತಿಯನ್ನು ಹಂಗಾಮಿ ಹುದ್ದೆಗೆ ನೇಮಕ ಮಾಡುವಂತಿಲ್ಲ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಹಮತಿ ಇಲ್ಲದೆ ಹುದ್ದೆಗೆ ಯಾರನ್ನೂ ನೇಮಿಸುವಂತಿಲ್ಲ. ಹೀಗಾಗಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಹಂಗಾಮಿ ನಿರ್ದೇಶಕರನ್ನು ವಜಾ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.