Advertisement

Board Examination: ತೀರ್ಪು ಕಾದಿರಿಸಿದ ಹೈಕೋರ್ಟ್‌

12:14 AM Mar 19, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್‌ ಮಟ್ಟದ ಮೌಲ್ಯಾಂಕನ ಪರೀಕ್ಷೆ ಸಂಬಂಧಿಸಿದ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪನ್ನು ಕಾದಿರಿಸಿದೆ.

Advertisement

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್‌ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ಏಕಸದಸ್ಯ ನ್ಯಾಯಪೀಠ ರದ್ದುಪಡಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ| ಕೆ.ಸೋಮಶೇಖರ್‌ ಮತ್ತು ನ್ಯಾ| ರಾಜೇಶ್‌ ಕೆ.ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾದಿರಿಸಿದೆ.

ಅಲ್ಲದೆ, ಮುಂದಿನ ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟಿಸುವುದಾಗಿ ನ್ಯಾಯಪೀಠ ತಿಳಿಸಿದೆ ಮುಂದಾಗಿದೆ. ಅಲ್ಲದೆ ಪರೀಕ್ಷೆಗಳು ತಮಾಷೆಯಲ್ಲ. ಮಕ್ಕಳು ಹಲವು ದಿನಗಳಿಂದ ಸಿದ್ಧತೆ ಮಾಡಿಕೊಂಡಿರುತ್ತಾರೆ. ಆದರೆ ಪರೀಕ್ಷೆಯ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತರದ ಗೊಂದಲಗಳಿಗೆ ಕಾರಣವಾಗುತ್ತಿದೆ. ಮುಖ್ಯವಾಗಿ ಶಿಕ್ಷಣ ಇಲಾಖೆಗೆ ಆರ್‌ಟಿಐ ಕಾಯ್ದೆಯಡಿ ಪರೀಕ್ಷೆಗಳನ್ನು ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ವರ್ಷವೂ ಆರ್‌ಟಿಐ ಕಾಯ್ದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಜತೆಗೆ ಶಿಕ್ಷಣ ಇಲಾಖೆ ಸಮವರ್ತಿ ಪಟ್ಟಿಗೆ ಸೇರಿದ್ದು, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಅವಕಾಶವಿದೆ ಎಂದು ವಿಚಾರಣೆ ವೇಳೆ ಸರಕಾರ ಪ್ರತಿಪಾದಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next