ಬಾಗ್‌ಪತ್ : ಉತ್ತರಪ್ರದೇಶದಲ್ಲಿ ಯಮುನಾ ನದಿಯಲ್ಲಿ ಗುರುವಾರ ಬೋಟ್‌ವೊಂದು ಮಗುಚಿ ಬಿದ್ದ ಪರಿಣಾಮ ಕನಿಷ್ಠ 22 ಮಂದಿ ನೀರು ಪಾಲಾಗಿದ್ದಾರೆ ಎಂದು ವರದಿಯಾಗಿದೆ.
ಸುಮಾರು 60 ಮಂದಿಯನ್ನು ತುಂಬಿಕೊಂಡು ಹರ್ಯಾಣದತ್ತ ಪ್ರಯಾಣ ಬೆಳೆಸಿದ್ದ ಬೋಟ್ ಕಾಥಾ ಎಂಬಲ್ಲಿ ಮಗುಚಿದ್ದು, ಇದುವರೆಗೆ 12 ಮಂದಿ ರಕ್ಷಣೆಗೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ.ದುರ್ಘಟನೆಯ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಸುತ್ತಮುತ್ತಲಿನ ಸಾವಿರಾರು ಜನರು ಆಗಮಿಸಿ ಜಮಾವಣೆಗೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳದ ಸಿಬಂದಿಗಳು, ಆಗಮಿಸಿದ್ದು ರಕ್ಷಣಾ ಕಾರ್ಯ ನಿರತರಾಗಿದ್ದು, 22 ಮಂದಿಯ ಶವಗಳನ್ನು ಮೇಲಕ್ಕೆತ್ತಲಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಬಳಿಕ ಉದ್ರಿಕ್ತರಾದ ಸಾರ್ವಜನಿಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತ ಪಡಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.
ಹೆಚ್ಚಿನ ವಿವರ ನಿರೀಕ್ಷಸಲಾಗುತ್ತಿದೆ.