Advertisement

Boat Capsizes: 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ… ಹಲವರ ರಕ್ಷಣೆ

12:35 PM Sep 14, 2023 | Team Udayavani |

ಮುಜಾಫರ್‌ಪುರ: 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ ಸಂಭವಿಸಿದೆ.

Advertisement

ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಮಕ್ಕಳ ಶೋಧ ಕಾರ್ಯಾ ನಡೆಯುತ್ತಿದೆ.

ರಕ್ಷಣಾ ತಂಡದಿಂದ ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡವು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.

ಇದನ್ನೂ ಓದಿ: Anantnag; ಲಷ್ಕರ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಸುತ್ತುವರಿದ ಭದ್ರತಾ ಪಡೆಗಳು

Advertisement

Udayavani is now on Telegram. Click here to join our channel and stay updated with the latest news.

Next