Advertisement

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

06:34 PM Dec 18, 2024 | Team Udayavani |

ಮುಂಬೈ: ಅರುವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬೋಟೊಂದು ಮುಳುಗಿದ ಪರಿಣಾಮ ಓರ್ವ ಮೃತಪಟ್ಟು ಮೂವರು ನಾಪತ್ತೆಯಾಗಿರುವ ಘಟನೆ ಮುಂಬೈಯ ಗೇಟ್‌ವೇ ಆಫ್ ಇಂಡಿಯಾ ಬಳಿ ಬುಧವಾರ (ಡಿ.18) ಸಂಭವಿಸಿದೆ.

Advertisement

ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಜನರನ್ನು ಕರೆದೊಯ್ಯುತ್ತಿದ್ದ ‘ನೀಲ್ಕಮಲ್’ ಹೆಸರಿನ ಬೋಟಿಗೆ ಸ್ಪೀಡ್ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಅರುವತ್ತಕ್ಕೂ ಹೆಚ್ಚು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮುಳುಗಲು ಆರಂಭಿಸಿದೆ ಕೂಡಲೇ ರಕ್ಷಣಾ ತಂಡಕ್ಕೆ ಮಾಹಿತಿ ರವಾನೆಯಾಗಿದ್ದು ನೌಕಾಪಡೆ, ಕೋಸ್ಟ್ ಗಾರ್ಡ್, ಪೊಲೀಸ್ ಸಿಬಂದಿ ಮತ್ತು ಸ್ಥಳೀಯ ಮೀನುಗಾರಿಕಾ ದೋಣಿಗಳ ಸಹಾಯದಿಂದ ಪ್ರಯಾಣಿಕರನ್ನು ರಕ್ಷಿಸುವ ಪ್ರಯತ್ನಗಳು ನಡೆದಿದೆ ಪರಿಣಾಮ 66 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು ಇನ್ನೂ ಮೂವರು ನಾಪತ್ತೆಯಾಗಿದ್ದು ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಗೇಟ್‌ವೇಯಿಂದ ಎಲಿಫೆಂಟಾ ದ್ವೀಪಕ್ಕೆ ಪ್ರಯಾಣಿಕರನ್ನು ಕರೆದೊಯ್ಯುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ನೀಲ್ ಕಮಲ್ ಬೋಟ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರವಾಸಿಗನೋರ್ವ ತನ್ನ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದಿದ್ದು ಈ ವೇಳೆ ಸ್ಪೀಡ್ ಬೋಟ್ ನೇರವಾಗಿ ಅರುವತ್ತು ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬೋಟ್ ಗೆ ಡಿಕ್ಕಿ ಹೊಡೆದಿರುವುದು ಕಂಡು ಬಂದಿದೆ ಇದಾದ ಬಳಿಕ ಬೋಟ್ ಮುಳುಗಲು ಆರಂಭವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ವೈರಲ್ ಆಗುತಿದ್ದು ಅದರಲ್ಲಿ ರಕ್ಷಣಾ ತಂಡ ಪ್ರಯಾಣಿಕರನ್ನು ರಕ್ಷಣೆ ಮಾಡಿ ಬೇರೆ ಬೋಟ್ ಗೆ ಸ್ಥಳಾಂತರಿಸುತ್ತಿರುವುದು ಕಾಣಬಹುದು.

Advertisement

ಇದನ್ನೂ ಓದಿ: Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Advertisement

Udayavani is now on Telegram. Click here to join our channel and stay updated with the latest news.

Next