Advertisement

ಬೋಟ್ ನಾಪತ್ತೆ: ಗೃಹ ಸಚಿವರಿಗೆ ಮನವಿ 

05:32 AM Jan 04, 2019 | |

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟನ್ನು ಶೀಘ್ರ ಪತ್ತೆಹಚ್ಚುವಂತೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ನೇತೃತ್ವದಲ್ಲಿ ಗುರುವಾರ ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.

Advertisement

ಮನವಿಗೆ ಸ್ಪಂದಿಸಿದ ಗೃಹಸಚಿವರು ಕೂಡಲೇ ರಕ್ಷಣಾ ಕಾರ್ಯದರ್ಶಿಗಳಿಗೆ ಕೇಂದ್ರ ಸರಕಾರದಿಂದಲೇ ಎಲ್ಲಾ ರೀತಿಯ ತನಿಖೆ ನಡೆಸಿ ಕಾಣೆಯಾದ ಬೋಟ್‌ ಮತ್ತು ಮೀನುಗಾರರನ್ನು ಪತ್ತೆಹಚ್ಚುವಂತೆ ಸೂಚಿಸಿದರು. ಮಹಾರಾಷ್ಟ್ರ, ಗೋವಾ  ಗಡಿ ಮತ್ತು ಗುಜರಾತ್‌ ಗಡಿಯಲ್ಲೂ ಮತ್ತು ಸಮುದ್ರ ಸೇರಿದಂತೆ ಸಂಶಯಾಸ್ಪದವಾಗಿರುವ ಪ್ರತಿ ಕಡೆಗಳಲ್ಲೂ ಪತ್ತೆಹಚ್ಚುವ ಕಾರ್ಯ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿದರು.

ಮಂಗಳೂರು ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್‌, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಮೊಗವೀರ ಯುವ ಸಂಘಟನೆ ಅಧ್ಯಕ್ಷ ವಿನಯ್‌ ಕರ್ಕೇರ, ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬೆಂಗಳೂರಿನ ಶಿವಲಿಂಗಪ್ಪ, ಮೊಗವೀರ ಸಂಘಟನೆಯ ಮುಂದಾಳು ರಾಘವೇಂದ್ರ ಮೊದಲಾದವರು ನಿಯೋಗದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next