ಕುಂದಾಪುರ: ಪ್ರವಾಸಿಗರನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್ ಮಗುಚಿ ಬಿದ್ದು ಸಮುದ್ರ ಪಾಲಾಗಿದ್ದ ವ್ಯಕ್ತಿಯ ಶವ ಸೋಮವಾರ(ಡಿ.23) ಮುಂಜಾನೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ರೋಹಿದಾಸ್ (41) ಎನ್ನಲಾಗಿದೆ.
ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಬೋಟ್ ಮಗುಚಿ ರೋಹಿದಾಸ್ ಸಮುದ್ರಪಾಲಾಗಿದ್ದ ಈ ವೇಳೆ ಹುಡುಕಾಡಿದರೂ ರೋಹಿದಾಸ್ ದೇಹ ಪತ್ತೆಯಾಗಿರಲಿಲ್ಲ ಘಟನೆ ನಡೆದು 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗೂ ಮೋಹನ ಖಾರ್ವಿ ಇವರು ಇಂದು(ಸೋಮವಾರ) ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳುತ್ತಿದ್ದ ವೇಳೆ ಶವ ತೇಲುತ್ತಿರುವುದನ್ನು ಗಮನಿಸಿ, ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿ ಗೆ ಮಾಹಿತಿ ನೀಡಿದ್ದಾರೆ, ಬಳಿಕ ಮೂವರು ಸೇರಿ ಸಮುದ್ರದಲ್ಲಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದಿದ್ದಾರೆ, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗಂಗೊಳ್ಳಿ 24x 7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆಎನ್ ಡಿ ಸಿಬ್ಬಂಧಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ ಶವವನ್ನು ಇಬ್ರಾಹಿಂ ಗಂಗೊಳ್ಳಿ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕಕ್ಕೆ ಕೊಂಡೊಯ್ದಿದ್ದಾರೆ.
ಇದನ್ನೂ ಓದಿ: Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು