Advertisement

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

10:11 AM Apr 16, 2024 | Team Udayavani |

ಶ್ರೀನಗರ: ಶ್ರೀನಗರ ಬಳಿಯ ಝೇಲಂ ನದಿಯಲ್ಲಿ ದೋಣಿಯೊಂದು ಮುಳುಗಿ ಹಲವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

Advertisement

ಮಂಗಳವಾರ(ಏ.16 ರಂದು) ಈ ಘಟನೆ ನಡೆದಿದ್ದು, ನಾಪತ್ತೆಯಾಗಿರುವ ಜನರ ಪತ್ತೆಗೆ ರಾಜ್ಯ ವಿಪತ್ತು ಪರಿಹಾರ ಪಡೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.

ಬಟ್ವಾರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೋಟ್‌ ನಲ್ಲಿ 10 -12 ವಿದ್ಯಾರ್ಥಿಗಳು ಸೇರಿದಂತೆ ಹಲವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಝೀಲಂ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಸೋಮವಾರ ಸುರಿದ ಮಳೆಯಿಂದ ಭೂಕುಸಿತ ಉಂಟಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿತ್ತು.

ಘಟನೆಯಲ್ಲಿ ಹಲವರು ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next