Advertisement
ಶನಿವಾರ ಶ್ರೀನಗರದಲ್ಲಿ ಮತ್ತೊಂದು ಸುತ್ತಿನ ದಾಳಿ ನಡೆಸಿರುವ ಉಗ್ರರು, ಅರಬಿಂದ್ ಕುಮಾರ್ ಶಾ ಹಾಗೂ ವೀರೇಂದ್ರ ಪಾಸ್ವಾನ್ ಎಂಬ ಬೀದಿಬದಿ ವ್ಯಾಪಾರಿಗಳನ್ನು ಹತ್ಯೆ ಮಾಡಿದ್ದಾರೆ.
Related Articles
Advertisement
ಯೋಧರ ಮೃತದೇಹ ಪತ್ತೆಜಮ್ಮು ಕಾಶ್ಮೀರದ ಜಿಲ್ಲೆಯಲ್ಲಿ 3 ದಿನಗಳ ಹಿಂದೆ ಉಗ್ರರ ವಿರುದ್ಧದ ಕಾರ್ಯಾಚರಣೆಯ ವೇಳೆ ನಾಪತ್ತೆಯಾಗಿದ್ದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಅಧಿಕಾರಿ (ಜೆಸಿಒ) ಹಾಗೂ ಇನ್ನಿಬ್ಬರು ಯೋಧರ ಮೃತದೇಹಗಳನ್ನು ಸೇನೆ ಪತ್ತೆ ಹಚ್ಚಿದೆ. ಕಾರ್ಯಾಚರಣೆಯ ನಂತರ ಈ ಮೂವರು ಕಾಣೆಯಾಗಿದ್ದು ತಿಳಿದುಬಂದಿತ್ತು. ಆ ಹಿನ್ನೆಲೆಯಲ್ಲಿ, ಇಡೀ ಪ್ರಾಂತ್ಯದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಕಾರ್ಯಾಚರಣೆ ಆರಂಭವಾಗಿ 48 ಗಂಟೆಗಳ ನಂತರ, ಮೃತದೇಹಗಳು ಸಿಕ್ಕಿವೆ. ಇಬ್ಬರು ಉಗ್ರರ ಹತ್ಯೆ
ಪುಲ್ವಾಮಾ ಜಿಲ್ಲೆಯ ಪಾಂಪೊರೆ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಕಮಾಂಡರ್ ಉಮರ್ ಮುಷ್ತಾಕ್ ಖಾಂಡೇ ಮೃತಪಟ್ಟಿದ್ದಾನೆ. ಈ ವರ್ಷ ಆರಂಭದಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಭಾಗವಹಿಸಿದ್ದ ಈತ ಇಬ್ಬರು ನಾಗರಿಕರನ್ನು ಕೊಂದಿದ್ದ ಎಂದು ಹೇಳಲಾಗಿದೆ. ದಾಳಿಯಲ್ಲಿ ಮೃತಪಟ್ಟಿರುವ ಮತ್ತೊಬ್ಬ ಉಗ್ರನ ಗುರುತು ಪತ್ತೆಯಾಗಿಲ್ಲ.