Advertisement
ಶುಕ್ರವಾರ ಬೆಳಗಿನ ಜಾವ ನಸುಕಿನ ವೇಳೆಯಲ್ಲಿ ಸಾರ್ವಜನಿಕರು ಕೆರೆಯ ಏರಿಯ ಮೇಲೆ ವಾಕಿಂಗ್ ಹೋಗುವಾಗ ಕೆರೆಯ ದಡದಲ್ಲಿಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ್ದ ಸ್ಥಿತಿಯಲ್ಲಿದ್ದ ಶವ ತೇಲುತ್ತಿರುವುದನ್ನು ಕಂಡು ಗಾಬರಿಗೊಂಡು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
Related Articles
Advertisement
ಇದನ್ನೂ ಓದಿ:ಮೈಸೂರು: ಲಾಕ್‌ಡೌನ್‌ನಿಂದ ಕೆಲಸ ಇಲ್ಲದೇ ಮನನೊಂದ ಯುವಕ ಆತ್ಮಹತ್ಯೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್, ಡಿವೈಎಸ್ಪಿ ರವಿಪ್ರಸಾದ್, ಸಿಪಿಐ ಜಗದೀಶ್ ಹಾಗೂ ಬಿ.ಆರ್.ಪ್ರದೀಪ್, ಪಿಎಸ್ಐ ಸದಾಶಿವ ತಿಪ್ಪಾರೆಡ್ಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದ್ದು ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪಿರಿಯಾಪಟ್ಟಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.