ಮುಂಬಯಿ : ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ.
Advertisement
ಮೃತ ವ್ಯಕ್ತಿಯನ್ನು ಪುಣೆಯ ಯಶವಂತ್ ನಗರದ ನಿವಾಸಿಯಾದ ಸಂಜಯ್ ಕಾರ್ಲೆ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ತೆರಳಿ ಪೊಲೀಸರ ತಂಡ ಪರಿಶೀಲನೆ ನಡೆಸಿದ್ದು ಮೃತ ವ್ಯಕ್ತಿಯ ದೇಹದ ಮೇಲೆ ನಾಲ್ಕು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ವಿಶೇಷ ತಂಡ ರಚನೆ ಮಾಡಿದ್ದು, ತನಿಖೆ ಚುರುಕುಗೊಳಿಸಿದೆ.
Related Articles
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಹೋಟೆಲ್, ಎಟಿಎಂ ಕೇಂದ್ರ
Advertisement