Advertisement

ಚಿಕ್ಕಮಗಳೂರಿನಲ್ಲಿ ನಿಲ್ಲದ ವರುಣ ಆರ್ಭಟ: ಭದ್ರಾ ನದಿಯ ಪ್ರವಾಹಕ್ಕೆ ಮೂಕ ಪ್ರಾಣಿ ಬಲಿ!

10:18 AM Jul 16, 2022 | Team Udayavani |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವರುಣನ ಆರ್ಭಟ ನಿಲ್ಲುತ್ತಿಲ್ಲ. ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ಗುಡ್ಡ ಕುಸಿತ, ಪ್ರವಾಹ, ಬಿಡದೇ ಸುರಿಯುತ್ತಿರುವ ಮಳೆಯಿಂದ ಜನತೆ ಕಂಗಾಲಾಗಿದ್ದಾರೆ.

Advertisement

ಕಳಸ, ಕುದುರೆಮುಖ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮೇಲೆ ಹಸುವಿನ ಮೃತದೇಹ ಕೊಚ್ಚಿಕೊಂಡು ಬಂದಿದೆ. ಭದ್ರಾ ನದಿಯ ಆರ್ಭಟಕ್ಕೆ ಮೂಕ ಪ್ರಾಣಿ ಬಲಿಯಾಗಿದೆ.

ಭಾರೀ ವಾಹನ ಸಂಚಾರ ನಿಷೇಧ: ಚಿಕ್ಕಮಗಳೂರು ತಾಲೂಕು ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ, ದಬೆ ದಬ್‌ ಫಾಲ್ಸ್‌ ಇತರೆ ಗಿರಿ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಪ್ರಮಾಣದಲ್ಲಿ ಗಾಳಿ ಮತ್ತು ಮಂಜು ಆವರಿಸಿರುವುದರಿಂದ ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಮರಗಳು ರಸ್ತೆ ಮೇಲೆ ಬಿದ್ದು ಅಂಚಾರಕ್ಕೆ ಅಡ್ಡಿಯಾಗುತ್ತಿರುವುದರಿಂದ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕೈಮರ ಚೆಕ್‌ಪೋಸ್ಟ್‌, ಕೆಮ್ಮಣ್ಣುಗುಂಡಿ ಕ್ರಾಸ್‌, ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್‌ ದರ್ಗಾ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ ಎಂದು ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಆದೇಶಿಸಿದ್ದಾರೆ.

ಇದನ್ನೂ ಓದಿ:ಚಂದ್ರು ಕೊಲೆ ಸಂದರ್ಭ ಭಾಷೆ ಜಟಾಪಟಿ: “ಕನ್ನಡ ಬರುವುದಿಲ್ಲ, ಉರ್ದುವಿನಲ್ಲಿ ಹೇಳು”

Advertisement

Udayavani is now on Telegram. Click here to join our channel and stay updated with the latest news.

Next