ನವದೆಹಲಿ:ಗಾಜಾದಲ್ಲಿ ಪ್ಯಾಲೆಸ್ಟೈನ್ ಮೂಲದ ಭಯೋತ್ಪಾದಕ ಸಂಘಟನೆ ನಡೆಸಿದ ರಾಕೆಟ್ ದಾಳಿಯಲ್ಲಿ ಇಸ್ರೇಲ್ ನಲ್ಲಿ ಸಾವನ್ನಪ್ಪಿದ್ದ ಕೇರಳದ ಸೌಮ್ಯ ಸಂತೋಷ್ ಅವರ ಪಾರ್ಥಿವ ಶರೀರ ಶನಿವಾರ(ಮೇ 15) ಬೆಳಗ್ಗೆ ನವದೆಹಲಿಗೆ ಆಗಮಿಸಿದೆ.
ಇದನ್ನೂ ಓದಿ:ಮಂಗಳೂರು : ಎಂಜಿನ್ ಸಮಸ್ಯೆಯಿಂದ ಸಮುದ್ರದಲ್ಲಿ ಸಿಲುಕಿದ ಬೋಟ್; ಮೂವರು ಮೀನುಗಾರರ ರಕ್ಷಣೆ
ಇಸ್ರೇಲ್ ನಿಂದ ಭಾರತಕ್ಕೆ ಆಗಮಿಸಿದ್ದ ಸೌಮ್ಯ ಸಂತೋಷ್ ಪಾರ್ಥಿವ ಶರೀರವನ್ನು ಬರಮಾಡಿಕೊಂಡ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಿ ಮುರಳೀಧರನ್ ಮತ್ತು ಇಸ್ರೇಲ್ ಉಪರಾಯಭಾರಿ ರೋನಿ ಯೆಡಿಡಿಯಾ ಕ್ಲೈನ್ ಅವರು ಅಂತಿಮ ಗೌರವ ಸಲ್ಲಿಸಿದರು.
ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯ ಸಂತೋಷ್ ದಕ್ಷಿಣ ಇಸ್ರೇಲ್ ನ ಕರಾವಳಿ ನಗರವಾದ ಅಶ್ಕೆಲೋನ್ ನ ಮನೆಯೊಂದರಲ್ಲಿ ವೃದ್ಧೆಯೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಸಂಘರ್ಷದ ವೇಳೆ ಉಗ್ರರು ಉಡಾಯಿಸಿದ ರಾಕೆಟ್ ವೃದ್ಧೆಯ ಮನೆಗೆ ಅಪ್ಪಳಿಸಿತ್ತು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಸೌಮ್ಯ ಸಂತೋಷ್ ಅವರ ಸಾವಿಗೆ ಸಂತಾಪ ಸೂಚಿಸಿದ್ದ ಇಸ್ರೇಲ್ ಸರ್ಕಾರ, ಆಕೆಯ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸಿಕೊಡುವುದಾಗಿ ತಿಳಿಸಿತ್ತು.