ಲಖ್ನೋ: ಮಹಿಳೆಯೊಬ್ಬರು ನರ್ಸಿಂಗ್ ಕೆಲಸಕ್ಕೆ ಸೇರಿದ ಮೊದಲ ದಿನವೇ ಶವವಾಗಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ.
ಖಾಸಗಿ ನರ್ಸಿಂಗ್ ಹೋಂ ಗೋಡೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಶನಿವಾರ ಬೆಳಗ್ಗೆ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಲಾಗಿದೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ನರ್ಸಿಂಗ್ ಹೋಂನ ಆಡಳಿತಗಾರ ಸೇರಿದಂತೆ ಮೂವರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ.
ಇದನ್ನೂ ಓದಿ:“ಇದು ಮೋದಿ ವಿರೋಧಿ ಮನೋಭಾವದ ಪ್ರತೀಕ’; ಮುಂದುವರಿದ ಮಾಜಿಗಳ “ಬಹಿರಂಗ ಪತ್ರ’ ಸಮರ
“ನ್ಯೂ ಜೀವನ್ ಆಸ್ಪತ್ರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು, ಮರಣೋತ್ತರ ಪರೀಕ್ಷೆಗೆ ಆದೇಶಿಸಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಮತ್ತು ನಂತರ ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಉನ್ನಾವ್‌ನ ಹೆಚ್ಚುವರಿ ಎಸ್ಪಿ ಶಶಿಶೇಖರ್ ಸಿಂಗ್ ಹೇಳಿದ್ದಾರೆ.
ವರದಿಗಳ ಪ್ರಕಾರ, ಮೃತ ಮಹಿಳೆ ನರ್ಸ್ ಆಗಿದ್ದರು. ಶುಕ್ರವಾರ ಆಕೆಯ ಮೊದಲ ಕೆಲಸದ ದಿನವಾಗಿತ್ತು. ಮರುದಿನ ಆಕೆ ಶವವಾಗಿ ಪತ್ತೆಯಾಗಿದ್ದಳು.