Advertisement

Kolkata; ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅರೆನಗ್ನ ಶವ ಪತ್ತೆ: ಅತ್ಯಾಚಾರ ಆರೋಪ

08:14 PM Aug 09, 2024 | Team Udayavani |

ಹೊಸದಿಲ್ಲಿ: ಕೋಲ್ಕತಾದ ಸರಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (PGT) ವೈದ್ಯೆಯ ಅರೆ ನಗ್ನ ಶವ ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಮೃತ ದುರ್ದೈವಿ ದ್ವಿತೀಯ ವರ್ಷದ PGT ವಿದ್ಯಾರ್ಥಿಯಾಗಿದ್ದು, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಳಗೆ ಗುರುವಾರ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ದೇಹದ ಮೇಲೆ ಗಾಯದ ಗುರುತುಗಳಿವೆ. ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ. ಸತ್ಯವನ್ನು ಮರೆಮಾಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೃತ ವೈದ್ಯೆಯ ತಂದೆ ಆರೋಪಿಸಿದ್ದಾರೆ.

“ಸಹ ವಿದ್ಯಾರ್ಥಿಗಳು ಶವವನ್ನು ಸೆಮಿನಾರ್ ಹಾಲ್‌ನಲ್ಲಿ ಪತ್ತೆ ಮಾಡಿದ್ದಾರೆ. ನಾವು ನಿನ್ನೆ ರಾತ್ರಿ  ಕರ್ತವ್ಯದಲ್ಲಿದ್ದ ವೈದ್ಯರು, ದಾದಿಯರು ಮತ್ತು ಇತರರೊಂದಿಗೆ ಮಾತನಾಡುತ್ತಿದ್ದೇವೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವೈದ್ಯೆಯ ಪೋಷಕರಿಗೆ ದೂರವಾಣಿ ಕರೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವ್ಯಾಪಕ ಆಕ್ರೋಶ

Advertisement

ಮಹಿಳೆ ಪಿಜಿಟಿ ಸಾವಿನ ಕುರಿತು ತ್ವರಿತ ತನಿಖೆಗೆ ಒತ್ತಾಯಿಸಿ ಹಲವಾರು ವಿದ್ಯಾರ್ಥಿ ಸಂಘಗಳು ಬೀದಿಗಿಳಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದೆ.

ಪ್ರತಿಪಕ್ಷ ಬಿಜೆಪಿ ಶಾಸಕಿ ಅಗ್ನಿಮಿತ್ರ ಪಾಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಮ್ಯಾಜಿಸ್ಟ್ರೇಟ್ ಅಡಿಯಲ್ಲಿ ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next