Advertisement

ಬೋಫೋರ್ಸ್‌ ಕೇಸಲ್ಲಿ ಸಿಬಿಐ ಮೇಲ್ಮನವಿ ಸಲ್ಲಿಕೆ ಬೇಡ: ಎ.ಜಿ

09:55 AM Jan 30, 2018 | |

ನವದೆಹಲಿ: ದಶಕಗಳ ಹಿಂದಿನ ಬೋಫೋರ್ಸ್‌ ಲಂಚ ಪ್ರಕರಣದಲ್ಲಿ ಸಿಬಿಐ ಸುಪ್ರೀಂಕೋರ್ಟ್‌ ಮುಂದೆ ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಬಾರದು ಎಂದು ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 

Advertisement

ಇದೇ ಮಾದರಿಯ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದ್ದು, ಅದರಲ್ಲಿಯೂ ಸಿಬಿಐ ಪ್ರತಿವಾದಿಯಾಗಿದೆ. ಹೀಗಾಗಿ, ಕೇಂದ್ರ ತನಿಖಾ ಸಂಸ್ಥೆ ತನ್ನ ನಿಲುವನ್ನು ತಿಳಿಸಬೇಕು ಎಂದು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಇತ್ತೀಚೆಗೆ ಬರೆದ ಪತ್ರದಲ್ಲಿ ಅಟಾರ್ನಿ ಜನರಲ್‌ ಸಲಹೆ ನೀಡಿದ್ದಾರೆ. 1990ರಲ್ಲಿ ಸಿಬಿಐ ಪ್ರಕರಣದ ಬಗ್ಗೆ ಎಫ್ಐಆರ್‌ ದಾಖಲಿಸಿತ್ತು. ಅದನ್ನು ಪತ್ರದಲ್ಲಿ ಉಲ್ಲೇಖೀಸಿರುವ ಎ.ಜಿ. “ಪ್ರಕರಣ ದಾಖಲಿಸಿ 12 ವರ್ಷ ಕಳೆದಿದೆ. ಹೀಗಾಗಿ ಸುಪ್ರೀಂಕೋರ್ಟಲ್ಲಿ ಎಸ್‌ಎಲ್‌ಪಿ ದಾಖಲಿಸಿದರೆ ಅದು ತಿರಸ್ಕೃತವಾಗುವ ಸಾಧ್ಯತೆಯೇ ಹೆಚ್ಚು. ಸುಪ್ರೀಂಗೆ ಮೇಲ್ಮನವಿ ಸಲ್ಲಿಸದೇ ಇರುವ ಬಗ್ಗೆ ಸಕಾರಣಗಳು ಕಾಣಿಸುತ್ತಿಲ್ಲ. ನಿಯಮ ಪ್ರಕಾರ 90 ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಬೇಕು’ ಎಂದು ವೇಣುಗೋಪಾಲ್‌ ಪತ್ರದಲ್ಲಿ ಉಲ್ಲೇಖೀಸಿದ್ದಾರೆ.

ಹಗರಣದಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿ 2005 ಮೇ 31ರಂದು ದೆಹಲಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ಈ ಹಿಂದೆ ಹೇಳಿತ್ತು.

Advertisement

Udayavani is now on Telegram. Click here to join our channel and stay updated with the latest news.

Next