Advertisement
ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಮಹತ್ವದ ಸುಳಿವು ಸಿಕ್ಕಿಲ್ಲ. ಸದ್ಯಕ್ಕೆ ಊಹಾಪೋಹಗಳು ಹರಡುತ್ತಿದ್ದು, ಖಚಿತ ಮಾಹಿತಿ ಸಿಕ್ಕಿಲ್ಲ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ. ಸುಳಿವು ಸಿಕ್ಕಿದಾಗ ತಿಳಿಸುತ್ತೇವೆ. ಯತೀಶ್ ಎನ್.,ಪೊಲೀಸ್ ವರಿಷ್ಠಾಧಿಕಾರಿ
ಬಂಟ್ವಾಳ:ಕೆಲವು ದಿನಗಳಿಂದ ಕೇರಳದಲ್ಲಿ ಬೀಡುಬಿಟ್ಟಿದ್ದ ಪೊಲೀಸರ ತಂಡ ಜಿಲ್ಲೆಗೆ ಮರಳಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಬಂಟ್ವಾಳ ಡಿವೈಎಸ್ಪಿ ಕಚೇರಿಯಲ್ಲಿ ಅಧಿಕಾರಿಗಳು ಸಭೆ ನಡೆಸಿ ಮುಂದಿನ ತನಿಖೆ ಕುರಿತು ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಎಸ್ಪಿ ಯತೀಶ್ ಎನ್. ಅವರು ಜ. 8ರಂದು ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ ಡಿವೈಎಸ್ಪಿ ಎಸ್.ವಿಜಯಪ್ರಸಾದ್ ಸಹಿತ ತನಿಖಾ ತಂಡದ ಇನ್ಸ್ಪೆಕ್ಟರ್, ಪಿಎಸ್ಐಗಳ ಜತೆಗೆ ಸರಣಿ ಮಾತುಕತೆ ನಡೆಸಿದ್ದಾರೆ. ಕೇರಳ ಭಾಗದಿಂದ ಸಂಗ್ರಹಿಸಿಕೊಂಡು ಬಂದಿರುವ ಮಾಹಿತಿಗಳ ತಾಂತ್ರಿಕ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.
Related Articles
Advertisement
ರಮಾನಾಥ ರೈ ಭೇಟಿ ಸುಲೈಮಾನ್ ಮನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಮನೆಯವರಿಂದ ಮಾಹಿತಿ ಪಡೆದುಕೊಂಡರು. ಜತೆಗೆ ರಾಜ್ಯ ಗೃಹ ಸಚಿವರು, ಪಶ್ಚಿಮ ವಲಯ ಐಜಿಪಿ ಹಾಗೂ ಎಸ್ಪಿ ಜತೆಗೆ ದೂರವಾಣಿ ಮೂಲಕ ಮಾತನಾಡಿ, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಸೂಚಿಸಿದರು.