Advertisement

ಬೊಲೆರೊ-ಲಾರಿ ಢಿಕ್ಕಿ: ಮೂರು ಸಾವು

02:17 AM Jul 02, 2019 | Team Udayavani |

ಉಪ್ಪಿನಂಗಡಿ: ನೆಲ್ಯಾಡಿಯ ಬೆಥನಿಶಾಲೆಯ ಸಮೀಪ ಲಾರಿ ಮತ್ತು ಬೊಲೆರೊ ನಡುವೆ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸಂಭ ವಿಸಿದ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ.

Advertisement

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೊಲೆರೊ ಮತ್ತು ಮಂಗಳೂರಿನಿಂದ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿತು. ಬೊಲೆರೊ ದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿ ಗೀಡಾಗಿದ್ದು, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಕೊನೆಯುಸಿರೆಳೆದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬೊಲೆರೊದಲ್ಲಿ ಒಟ್ಟು ನಾಲ್ವರಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಟ್ರಾಫಿಕ್‌ ಜಾಮ್‌: ಕಿರು ಸೇತುವೆಯ ಮೇಲೆ ಅಪಘಾತ ಸಂಭವಿಸಿದ್ದರಿಂದ ಕೆಲವು ಸಮಯ ಟ್ರಾಫಿಕ್‌ ಜಾಮ್‌ ಉಂಟಾಗಿ ಬೆಂಗಳೂರು-ಮಂಗಳೂರು ನಡುವಿನ ವಾಹನ ಸಂಚಾರ ಸ್ಥಗಿತಗೊಂಡಿತು.

ಘಟನ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next