Advertisement

ಬೊಲೆರೊ ವಾಹನ ಪಲ್ಟಿಯಾಗಿ ಓರ್ವ ಸಾವು; ಹತ್ತು ಮಂದಿಗೆ ಗಾಯ

12:42 PM Jul 31, 2022 | Team Udayavani |

ಚಿತ್ರದುರ್ಗ: ಇಲ್ಲಿನ ಕೆ.ಆರ್.ಹಳ್ಳಿ ಗೇಟ್ ಬಳಿ ಬೊಲೆರೊ ವಾಹನವೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ಈ ಅಪಘಾತದಲ್ಲಿ ಹತ್ತು ಮಂದಿ ಗಾಯಗೊಂಡಿದ್ದಾರೆ.

Advertisement

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬೊಲೆರೊ ವಾಹನದಲ್ಲಿದ್ದವರು ತಿರುಪತಿಯಿಂದ ಮಹಾರಾಷ್ಟ್ರಕ್ಕೆ ವಾಪಸ್ಸಾಗುತ್ತಿದ್ದರು ಎಂದು ವರದಿಯಾಗಿದೆ.

ಸಾವನ್ನಪ್ಪಿದವರನ್ನು ಮಹಾರಾಷ್ಟ್ರ ಮೂಲದ ರಾಜು (40 ವ) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಹತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next