Advertisement
ಬೋಳಿಯಾರ್ ಮತ ಕೇಂದ್ರದ ಮತದಾರರೂ ಆಗಿರುವ ಅವರು ತಮ್ಮದೇ ಪರಿಸರದ ಸಂತ್ರಸ್ತರಿಗೆ ಸ್ಥೈರ್ಯ ತುಂಬಬೇಕಿತ್ತು. ಅದು ಬಿಟ್ಟು ಸಹಾಯಹಸ್ತ ನೀಡಲು ಬಂದವರನ್ನು “ಹೊರಗಿನವರು’ ಎಂದು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ: ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಬೋಳಿಯಾರ್‌ನಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ನಾಲ್ವರನ್ನು ಶುಕ್ರವಾರ ಬೋಳಿಯಾರ್‌ನಲ್ಲಿ ಸ್ಥಳ ಮಹಜರು ನಡೆಸಿದ್ದು, ನಾಲ್ಕು ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಯಲ್ಲಿ ತನಿಖೆ ನಡೆಸಲಿದ್ದಾರೆ.
Related Articles
Advertisement
ಕೋಟ ಶ್ರೀನಿವಾಸ ಪೂಜಾರಿ ಭೇಟಿಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ದೇರಳಕಟ್ಟೆ ಆಸ್ಪತ್ರೆಗೆ ಭೇಟಿ ನೀಡಿ ಚೂರಿ ಇರಿತಕ್ಕೊಳಗಾಇರುವ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.