Advertisement

Boliyar Stabbing Case: ಹೋರಾಟದ ಎಚ್ಚರಿಕೆ ನೀಡಿದ ಬಿಜೆಪಿ

07:09 PM Jun 11, 2024 | Team Udayavani |

ಮಂಗಳೂರು: ಬೋಳಿಯಾರ್‌ ನಲ್ಲಿ ಬಿಜೆಪಿಯ ವಿಜಯೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಚೂರಿ ಇರಿತ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆಯ ಹಿಂದಿರುವ ಶಕ್ತಿಗಳನ್ನು ಪತ್ತೆ ಮಾಡಿ ಜನರ ಮುಂದೆ ತಂದು ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಹೋರಾಟದ ಹಾದಿ ಹಿಡಿಯಲಾಗುವುದು ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Advertisement

ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಸ್ವತಂತ್ರವಾಗಿ, ಸಾಂವಿಧಾನಿಕವಾಗಿ ಜಿಲ್ಲೆಯ ರಕ್ಷಣೆಯ ಕೆಲಸ ಮಾಡಬೇಕು. ಕಾಂಗ್ರೆಸ್‌ನ ಅಣತಿಯಂತೆ ಕೆಲಸ ಮಾಡುವುದನ್ನು ನಿಲ್ಲಿಸಬೇಕು. ‘ಭಾರತ್ ಮಾತಾಕೀ ಜೈ’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಸೋಮವಾರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅದೇ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಚೂರಿ ಇರಿತಕ್ಕೆ ಒಳಗಾದವರು ಚಿಕಿತ್ಸೆ ಪಡೆಯುತ್ತಿದ್ದರೂ, ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಕ್ಷೇತ್ರದ ಶಾಸಕರೂ ಆಗಿರುವ ವಿಧಾನ ಸಭಾಧ್ಯಕ್ಷರು ಆಸ್ಪತ್ರೆಯ ಮುಂಭಾಗದ ರಸ್ತೆಯಲ್ಲಿ ಹಲವು ಬಾರಿ ಸಾಗಿದರೂ ಆಸ್ಪತ್ರೆಗೆ ಭೇಟಿ ನೀಡುವ ಮನಸ್ಸು ಮಾಡಿಲ್ಲ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು ಈಗಾಗಲೇ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಜೂ.12ರಂದು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next