Advertisement
ಹೌದು, ನಿರ್ದೇಶಕ ಅನೂಪ್ ಭಂಡಾರಿ ಅವರ ವಿಕ್ರಾಂತ್ ರೋಣ ಸಿನಿಮಾ ಸ್ಯಾಂಡಲ್ವುಡ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಮೇಕಿಂಗ್ ಹಾಗು ಸ್ಟಾರ್ ಕಾಸ್ಟ್ ನಿಂದ ಗಮನ ಸೆಳೆದಿರುವ ಈ ಸಿನಿಮಾ ಇದೀಗ ಬಾಲಿವುಡ್ ನಿಂದ ಮತ್ತೋರ್ವ ನಟಿಯನ್ನು ಚಂದನವನಕ್ಕೆ ಕರೆ ತರುತ್ತಿದೆ.
Related Articles
Advertisement
‘ವಿಕ್ರಾಂತ್ ರೋಣ’ ಸಿನಿಮಾವನ್ನು 3ಡಿ ರೂಪದಲ್ಲಿ ರಿಲೀಸ್ ಮಾಡುವುದಕ್ಕೆ ನಿರ್ಮಾಪಕರು ನಿರ್ಧಾರ ಮಾಡಿದ್ದಾರೆ. ಹೈದರಾಬಾದ್, ಬೆಂಗಳೂರು, ಕೇರಳ ಭಾಗದಲ್ಲಿ ಈ ಸಿನಿಮಾದ ಶೂಟಿಂಗ್ ನಡೆದಿದೆ. ನಿರೂಪ್ ಭಂಡಾರಿ, ನೀತಾ ಅಶೋಕ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಈ ಸಿನಿಮಾಕ್ಕಿದೆ. ‘ವಿಕ್ರಾಂತ್ ರೋಣ’ ಹಾಗೂ ‘ಕೋಟಿಗೊಬ್ಬ 3’ ಸಿನಿಮಾಗಳ ನಡುವೆ ಯಾವ ಸಿನಿಮಾ ಮೊದಲು ರಿಲೀಸ್ ಆಗಲಿದೆ ಎಂದು ಕಾದು ನೋಡಬೇಕಿದೆ.